ಬೆಂಗಳೂರು: ಪುರಸಭೆಗಳಲ್ಲಿ ಸುಮಾರು 9300 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ತುಂಬಲು ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್. ನಾಗರಾಜು (ಎಂ.ಟಿ.ಬಿ) ತಿಳಿಸಿದರು.
ವಿಧಾನ ಪರಿಷತ್ತಿನ ಅಧಿವೇಶನದ ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸದಸ್ಯರಾದ ಎಂ.ಎಲ್. ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಪುರಸಭೆಗಳಿಗೆ ಎಸ್.ಎಫ್.ಸಿ., ಅಮೃತ್ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ -4, ಸ್ವಚ್ಚ ಭಾರತ್ ಮಿಷನ್ ಮತ್ತು 15ನೇ ಹಣಕಾಸು ಆಯೋಗದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನವನ್ನು ಮಂಜೂರು ಮಾಡಲಾಗಿದೆ ಹಾಗೂ ರಾಜ್ಯದ ಪುರಸಭೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.