News Kannada
Friday, October 07 2022

ಬೆಂಗಳೂರು ನಗರ

ಕಾಂಗ್ರೆಸ್ ನವರಿಗೆ ರಾಜ್ಯದ ಜನತೆ ಹಿತಾಸಕ್ತಿಗಿಂತ ರಾಜಕಾರಣವೆ ಮುಖ್ಯವಾಗಿದೆ: ಸಿಎಂ ಆಕ್ರೋಶ - 1 min read

Photo Credit :

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿರುವ ನಿರ್ಧಾರವನ್ನು ಖಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕೆಳಮಟ್ಟಕ್ಕೆ ಹೋಗುವ ರಾಜಕಾರಣ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಸದನದಲ್ಲಿ ಚರ್ಚಿಸಲು ಬೇಕಾದಷ್ಟು ವಿಷಯಗಳಿವೆ. ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ. ಆದರೆ ಕಾಂಗ್ರೆಸ್ ಸದಸ್ಯರು ಇದಾವುದಕ್ಕೂ ಅವಕಾಶ ನೀಡದೇ ಕಲಾಪದ ವೇಳೆ ಪ್ರತಿಭಟನೆ ನಡೆಸಿದ್ದಾರೆ. ಈಗ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದ್ದಾರೆ. ಕಾಂಗ್ರೆಸ್ ನವರಿಗೆ ರಾಜ್ಯದ ಜನತೆ ಹಿತಾಸಕ್ತಿಗಿಂತ ರಾಜಕಾರಣವೆ ಮುಖ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಂತಿ-ಸೌಹಾರ್ದತೆ ಕಾಪಾಡುವುದು ನಮ್ಮ ಜವಾಬ್ದಾರಿ. ಸಂಧಾನ ಸಭೆ ನಡೆಸಿ ಧರಣಿ ವಾಪಸ್ ಪಡೆಯುವಂತೆ ಮನವೊಲಿಕೆ ಮಾಡಿದರೂ ಯಾವುದಕ್ಕೂ ಒಪ್ಪುತ್ತಿಲ್ಲ. ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಇದು ನಿಜಕ್ಕೂ ಕೆಳಮಟ್ಟಕ್ಕೆ ಹೋಗುವ ರಾಜಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

See also  80 ಲಸಿಕಾ ವಾಹನಗಳಿಗೆ ಚಾಲನೆ ನೀಡಿದ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು