ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ಮಾಡಿಲ್ಲ ನಾಳೆ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರಮದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೆ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.
ಇಲಾಖೆಯ ಕೆಲವು ಬೇಡಿಕೆಗಳ ಬಗ್ಗೆಯೂ ಸಿಎಂ ಗಮನ ಸೆಳೆಯುವ ಕೆಲಸ ಮಾಡಲಗಿದೆ.ಇದಕ್ಕೆ ಅವರು ಬಜೆಟ್ ನಲ್ಲಿ ಅಥವಾ ಆ ನಂತರ ಸೂಕ್ತ ವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಸಚಿವ ಕೆ.ಗೋಪಾಲಯ್ಯ ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿದರು.