ಕೋವಿಡ್ ಸಂಕಷ್ಟದಲ್ಲಿ ರಾಜ್ಯ ಇರುವ ಈ ಕ್ಷಣದಲ್ಲಿಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪರ ಜನ್ಮದಿನವಾಗಿದ್ದು, ಹಾಗಾಗಿ ಟ್ವೀಟ್ ಮೂಲಕ ಮನವಿ ಮಾಡಿದ ಅವರು, ‘ಆತ್ಮೀಯರೇ, ಹಿತೈಷಿಗಳೇ,ಕೊರೋನಾ ಸಂಕಷ್ಟಗಳ ಹಿನ್ನೆಲೆಯಲ್ಲಿ, ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ.
ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ ‘ಎಂದು ತಿಳಿಸಿದ್ದಾರೆ.
ಆತ್ಮೀಯರೇ, ಹಿತೈಷಿಗಳೇ, ಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ, ನಾಳೆ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಕೋರುತ್ತೇನೆ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ.
— B.S. Yediyurappa (@BSYBJP) February 26, 2022