News Kannada
Friday, October 07 2022

ಬೆಂಗಳೂರು ನಗರ

ಕನ್ನಡಿಗರ ಏರ್ ಲಿಫ್ಟ್ ಗೆ ಸರ್ಕಾರದಿಂದಲೇ ವೆಚ್ಚ ಭರಿಸಲಾಗುವುದು ಎಂದ ಸಿಎಂ - 1 min read

Photo Credit :

ಬೆಂಗಳೂರು: ಉಕ್ರೇನ್ ನಲ್ಲಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ ಮೊದಲ ತಂಡ ಆಗಮಿಸಿದೆ. ಉಳಿದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ನಡೆಯುತ್ತಿದೆ,ಕನ್ನಡಿಗರ ಸ್ಥಳಾಂತರದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಉಕ್ರೇನ್ ನ ವೆಸ್ಟರ್ನ್ ಭಾಗದಲ್ಲಿದ್ದ ವಿದ್ಯಾರ್ಥಿಗಳು ಆಗಮಿಸಿದ್ದಾರೆ.ದೆಹಲಿ ಹಾಗೂ ಮುಂಬೈಗೆ ಬಂದಿಳಿದ ಕನ್ನಡಿಗ ವಿದ್ಯಾರ್ಥಿಗಳನ್ನು ಕರೆತರುವ ವ್ಯವಸ್ಥೆ ಮಾಡುವಂತೆ ಹೈಕಮಿಷ್ನರ್ ಗೆ ಸೂಚಿಸಲಾಗಿದೆ ಎಂದರು.

ಕೇಂದ್ರ ವಿದೇಶಾಂಗ ಸಚಿವರ ಜತೆಯೂ ಮಾತುಕತೆ ನಡೆಸಿದ್ದೇನೆ. ರಾಷ್ಟ್ರೀಯ ವಿಪತ್ತು ನಿರ್ವಹಣೆ ಅಧಿಕಾರಿಗಳ ಜತೆಯೂ ಚರ್ಚಿಸಿದ್ದೇನೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಜತೆಯೂ ಮಾತನಾಡಿದ್ದೇನೆ. ಎರಡು ಸಹಾಯವಾಣಿ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದರು.

ಕರಕೈ ಪ್ರದೇಶದಲ್ಲಿ ಹೆಚ್ಚು ಕನ್ನಡಿಗ ವಿದ್ಯಾರ್ಥಿಗಳಿದ್ದಾರೆ. ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಯುದ್ಧ ನಡೆಯುತ್ತಿದೆ. ಮೆಟ್ರೋ, ಬಂಕರ್ ಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಯಾರೂ ಆತಂಕಪಡುವುದು ಬೇಡ. ಪರಿಸ್ಥಿತಿ ಕೊಂಚ ಸರಿಹೋಗುತ್ತಿದ್ದಂತೆ ಅವರನ್ನು ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

See also  ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು