News Kannada
Thursday, March 23 2023

ಬೆಂಗಳೂರು ನಗರ

ಭಾರತೀಯ ವಿದ್ಯಾರ್ಥಿ ನವೀನ್‌ʼ ಕುಟುಂಬಕ್ಕೆ ʼಸಿಎಂ ಬಸವರಾಜ ಬೊಮ್ಮಾಯಿʼ ಸಾಂತ್ವನ

Photo Credit : News Kannada

ಬೆಂಗಳೂರು : ರಷ್ಯಾ ದಾಳಿಗೆ ಉಕ್ರೇನ್​ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ ಗ್ಯಾನಗೌಡರ ಸಾವನ್ನಪ್ಪಿರುವುದನ್ನು ಕೇಂದ್ರ ವಿದೇಶಾಂಗ ಖಚಿತಪಡಿಸಿದೆ. ನವೀನ್​ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ನವೀನ್ ಅವರ ತಂದೆ ಶೇಖರಗೌಡ ಅವರಿಗೆ ಕರೆ ಮಾಡಿ ಸಾಂತ್ವನ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ಸಾವನ್ನಪ್ಪಿದ್ದು, ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ನವೀನ್​ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಮನೆಯಲ್ಲಿ ಶೋಕ ಮಡುಗಟ್ಟಿದ್ದು, ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪಾರ್ಥಿವ ಶರೀರ ತರಲು ಪ್ರಯತ್ನ
ನವೀನ್​​ ಸಾವಿನ ಕುರಿತು ವಿಷಾದ ವ್ಯಕ್ತಪಡಿಸಿ ಮಾತನಾಡಿದ ಅವರು, ಇದು ನಿಜಕ್ಕೂ ದೊಡ್ಡ ದುರಂತ. ದೇವರು ನವೀನ್ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ನೀವು ಧೈರ್ಯದಿಂದಿರಿ. ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆದಿದೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.

See also  ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು