ಬೆಂಗಳೂರು: ರಾಜ್ಯದಲ್ಲಿ ಇಂದು 202 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 971 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಇದುವರೆಗೆ 39,957 ಸೋಂಕಿತರು ಮೃತಪಟ್ಟಿದ್ದಾರೆ. 38,96,423 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ 4847 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 39,41,265 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 150 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಮೂವರು ಮೃತಪಟ್ಟಿದ್ದಾರೆ. 393 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3003 ಸಕ್ರಿಯ ಪ್ರಕರಣಗಳಿವೆ.
ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಡಗು, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಕೇಸ್ ವರದಿಯಾಗಿಲ್ಲ. ತುಮಕೂರು 10, ಮೈಸೂರು 6, ಉತ್ತರಕನ್ನಡ 4, ದಾವಣಗೆರೆ 4, ಚಿಕ್ಕಮಗಳೂರು 3, ಗದಗ 3, ಬೆಳಗಾವಿ 4, ಬಳ್ಳಾರಿ 3 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 3, ಬಳ್ಳಾರಿ, ದಕ್ಷಿಣಕನ್ನಡ, ದಾವಣಗೆರೆ, ಮೈಸೂರು ತಲಾ ಒಬ್ಬರು ಮೃತಪಟ್ಟಿದ್ದಾರೆ.