News Kannada
Saturday, October 01 2022

ಬೆಂಗಳೂರು ನಗರ

ಪ್ರಾಥಮಿಕ ಶಾಲಾ ಶಿಕ್ಷಣದಲ್ಲಿ ಪುನೀತ್ ಜೀವನ ಗಾಥೆ ಪಠ್ಯವಾಗುವ ಸಾಧ್ಯತೆ - 1 min read

Photo Credit : News Kannada

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಜೀವನ ಗಾಥೆ ಪಠ್ಯವಾಗುವ ಸಾಧ್ಯತೆಗಳಿವೆ  ಈ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರವಸೆ ನೀಡಿದ್ದಾರೆ.

ಚಿಕ್ಕ ವಯಸಿಸನಲ್ಲೇ ಪ್ರಶಸ್ತಿ ಪಡೆಯುವುದರ ಜತೆಗೆ ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಜರಾಮರ ಸೇವೆ ಸಲ್ಲಿಸುವ ಮೂಲಕ ಮಕ್ಕಳು ಮತ್ತು ಯುವಕರಿಗೆ ದಾರಿದೀಪವಾಗಿರುವ ಪುನೀತ್ ಅವರ ಜೀವನ ಗಾಥೆ ಮುಂದಿನ ಜನಾಂಗಕ್ಕೆ ಮಾದರಿಯಾಗಬೇಕು ಎಂಬ ಉದ್ದೇಶದಿಂದ ಅವರ ಪಠ್ಯವನ್ನು ಪ್ರಾಥಮಿಕ ಶಾಲೆಯ 4 ಅಥವಾ 5ನೆ ತರಗತಿಯ ಪಠ್ಯದಲ್ಲಿ ಅಳವಡಿಕೆ ಮಾಡಬೇಕು ಎಂದು ಹಲವಾರು ಸಂಘ-ಸಂಸ್ಥೆಗಳು ಬಿಬಿಎಂಪಿಯ ಶಿಕ್ಷಣ ವಿಭಾಗಕ್ಕೆ ಪತ್ರ ಬರೆದು ಒತ್ತಾಯಿಸಿದ್ದವು.

ಬಿಬಿಎಂಪಿ ಶಿಕ್ಷಣ ಇಲಾಖೆಗೆ ಬಂದಿದ್ದ ಸಂಘ-ಸಂಸ್ಥೆಗಳ ಮನವಿಯನ್ನು ಪಾಲಿಕೆ ಅಕಾರಿಗಳು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರು. ಎನ್.ಆರ್.ರಮೇಶ್ ಹಾಗೂ ಬಿಬಿಎಂಪಿಯ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಪ್ರಾಥಮಿಕ ಶಾಲೆಯ 4 ಅಥವಾ 5ನೆ ತರಗತಿಯ ಪಠ್ಯದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಬದುಕನ್ನು ಪಠ್ಯವನ್ನಾಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಾಗೇಶ್ ಅವರು ಭರವಸೆ ನೀಡಿದ್ದಾರೆ.

See also  ಕೀರ್ತಿಶೇಷ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ದುಬೈಯಲ್ಲಿ ರಕ್ತದಾನ ಶಿಬಿರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು