News Kannada
Tuesday, December 06 2022

ಬೆಂಗಳೂರು ನಗರ

ಚರಣ್‌ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

Photo Credit :

ಬೆಂಗಳೂರು ಮಾರ್ಚ್‌ 21: ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು.

ಇಂದು ಬೆಂಗಳೂರಿನ ಜಯನಗರದಲ್ಲಿರುವ ಶ್ರೀ ಚರಣ್ ಬ್ಯಾಂಕ್ ಶಾಖೆಯ ನ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು ಎನ್ನುವಂತಹ ವಿಷಯದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದೆ. ಇಂದಿನ ಶಿಕ್ಷಣ ವ್ಯವಸ್ಥೆ ಹಣವನ್ನು ಗಳಿಸುವ ಉದ್ದೇಶದ ಬ್ರಿಟೀಷ್‌ ಪದ್ಧತಿಯಾಗಿದೆ. ನನ್ನದೊಂದು ನಂಬಿಕೆ ಇದೆ ಅದನ್ನು ಹೇಳಿದರೆ ತಪ್ಪಾಗಲಾರದು, ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಇದೆ ಎಂದು ಅನಿಸುತ್ತದೆ. ಏಕೆಂದರೆ ಅದರಲ್ಲಿ ಯಾವ ಜಾತಿ, ಉಪಜಾತಿ, ಆ ರಾಜ್ಯ, ಈ ಭಾಷೆ ಆ ಗಡಿ, ಈ ಗಡಿ ಎನ್ನುವ ತಾರತಮ್ಯ ಇರಲಿಲ್ಲ. ಯಾವ ಭೇದಬಾವ ಕೂಡ ಇಲ್ಲ. ಸೃಷ್ಟಿಯ ಸತ್ಯ ಏನಿದೆಯೋ ಅದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಸೃಷ್ಟಿಯ ಸತ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು, ಹಾಗಾಗಿ ಅದನ್ನು ತಿಳಿದುಕೊಳ್ಳುವ ಶಿಕ್ಷಣ ಭಗವದ್ಗೀತೆಯಲ್ಲಿದೆ. ಹಾಗಾಗಿ ಭಗವದ್ಗೀತೆಯ ಶಿಕ್ಷಣವನ್ನು ನಾವು ಕಲಿಸಿದರೆ ತಪ್ಪಾಗಲಾರದು ಎನ್ನುವುದು ನನ್ನ ನಂಬಿಕೆ. ಹಾಗೂ ಅದನ್ನು ಕಲಿಸಬೇಕೆಂಬ ಆಗ್ರಹ ನನ್ನದಾಗಿದೆ.

ಶಿಕ್ಷಣ ಮಂತ್ರಿಯಾಗಿದ್ದಾಗ ಭಗವದ್ಗೀತಾ ಅಭಿಯಾನ ನಡೆಯಿತು. ಸ್ವರ್ಣವಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಂತಹ ಅಭಿಯಾನದಲ್ಲಿ ರಾಜ್ಯದ 20 ಲಕ್ಷ ವಿದ್ಯಾರ್ಥಿಗಳು ಭಗವದ್ಗೀತೆ ಕಲಿಯುವ ಅವಕಾಶವನ್ನು ನಾನು ಶಿಕ್ಷಣ ಮಂತ್ರಿಯಾಗಿ ಮಾಡಿಕೊಟ್ಟಿದ್ದೇನೆ. ಇಂದು ಅದು ಕಡ್ಡಾಯವಾಗಿ ಶಿಕ್ಷಣದಲ್ಲಿ ಅಳವಡಿಕೆ ಆಗಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಅದು ಬರಲಿ ಎಂದು ಆಶಿಸೋಣ ಭಗವದ್ಗೀತೆ ಶಿಕ್ಷಣದ ಭಾಗ ಆಗಬೇಕು, ಏಕೆಂದರೆ ಅದರಿಂದಾಗಿ ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುತ್ತದೆ. ಜೀವನದ ಸಾರ್ಥಕತೆಯನ್ನು ಅದು ನೀಡುತ್ತದೆ. ಹಣಗಳಿಸುವ ಶಿಕ್ಷಣ ವ್ಯವಸ್ಥೆಯಿಂದ, ನಮ್ಮ ಜೀವನ ಸಾರ್ಥಕಗೊಳಿಸುವ ಶಿಕ್ಷಣ ವ್ಯವಸ್ಥೆಯ ಕಡೆಗೆ ಹೋಗಲು ಭಗವದ್ಗೀತೆಯಂತಹ ಶಿಕ್ಷಣ ಬೇಕು. ನಾವು ಹಣಗಳಿಸುವ ವ್ಯವಸ್ಥೆಯಿಂದ ಪರಿವರ್ತನೆ ತರಬೇಕು ಎನ್ನುವುದಾದರೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ನಮಗೆ ಅಗತ್ಯ ಇದೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ಭಗವದ್ಗೀತೆಯಂತಹ ಶಿಕ್ಷಣದಲ್ಲಿ ಸಿಗುತ್ತದೆ ಎನ್ನುವುದು ನಮ್ಮ ನಂಬಿಕೆಯಾಗಿದೆ ಎಂದು ಹೇಳಿದರು.

ಹಣ ಮುಖ್ಯ ಆದರೆ ಹಣವನ್ನು ಹೇಗಾದರೂ ಗಳಿಸಲೇಬೇಕು ಎನ್ನುವಂತಹ ಹಪಾಹಪಿತನ ದುರಾಸೆಯನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ. ಯಾವ ಮಾರ್ಗದಿಂದಲಾದರೂ ಹಣ ಗಳಿಸಬೇಕು ಎನ್ನುವ ದುರಾಸೆ ಹೆಚ್ಚಾಗಿದೆ. ಆಸೆ ಇರಬೇಕು ನಿಜ ಆದರೆ ದುರಾಸೆ ಶುರುವಾದರೆ ವ್ಯವಸ್ಥೆಯಲ್ಲಿನ ಶಿಥಿಲತೆ ಶುರುವಾಗುತ್ತದೆ. ನಮಗೆ ಬೇಕಾಗಿರುವುದು ಧರ್ಮಮಾರ್ಗದಿಂದ ಗಳಿಸಿದಂತ ಹಣ ಮಾತ್ರ. ಈ ಹಿನ್ನಲೆಯಲ್ಲಿ ನಾವು ಆಧ್ಯಾತಿಕ ತಳಹದಿಯ ಶಿಕ್ಷಣವನ್ನು ಅಳವಡಿಸಿಕೊಳ್ಳುವದತ್ತ ಹೆಚ್ಚಿನ ಗಮನ ನೀಡಬೇಕಾಗಿದೆ ಎಂದರು.

See also  ಆನ್ಲೈನ್ ಕ್ಲಾಸ್ ವೇಳೆ ಅಶ್ಲೀಲ ವಿಡಿಯೋ ಓಪನ್

ಚರಣ್ ಬ್ಯಾಂಕ್ ಕಳೆದ 25 ವರ್ಷಗಳಲ್ಲಿ ಬಹಳಷ್ಟನ್ನು ಸಾಧಿಸಿದೆ. ಹಣಕಾಸಿನ ಸಂಸ್ಥೆ ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳುವುದು ಬಹಳ ಮುಖ್ಯವಾದ ವಿಷಯ. ಈ ನಿಟ್ಟಿನಲ್ಲಿ ಚರಣ್ ಬ್ಯಾಂಕ್ ಬಹಳಷ್ಟು ಸಾಧಿಸುವುದನ್ನು ನಾವು ಕಂಡಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಮಾರು ಐದು ದಶಕಗಳ ಅನುಭವವನ್ನು ಹೊಂದಿರುವಂತಹ ದ್ವಾರಕಾನಾಥ್ ನೇತೃತ್ವದ ಚರಣ್ ಬ್ಯಾಂಕ್ ಜನರಲ್ಲಿ ವಿಶ್ವಾರ್ಹತೆಯನ್ನು ಗಳಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ ಆಪರೇಟೀವ್‌ ಬ್ಯಾಂಕ್‌ ಲಿಮಿಟೆಡ್‌ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷರಾದ ಶುಭಪ್ರದ ಇಟಗಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು