News Kannada
Thursday, December 08 2022

ಬೆಂಗಳೂರು ನಗರ

ಭವಿಷ್ಯದಲ್ಲಿ ಯಾವುದೇ ಕೋವಿಡ್ ಅಲೆ ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ: ಸಚಿವ ಸುಧಾಕರ್

Photo Credit :

ಬೆಂಗಳೂರು: ಭವಿಷ್ಯದಲ್ಲಿ ಯಾವುದೇ ಕೋವಿಡ್ ಅಲೆ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯವು ಸನ್ನದ್ಧವಾಗಿದೆ  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೈದ್ಯರು, ಮೂಲಸೌಕರ್ಯ ಮತ್ತು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ಹೆಚ್ಚಿಸಲಾಗಿದೆ.

ನಾಲ್ಕನೇ ಅಲೆ ಎದುರಾದರೂ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಕೋವಿಡ್’ನ ಯಾವುದೇ ಅಲೆ ಎದುರಿಸಲು ಲಸಿಕೆ ಕವಚ ನಮಗೆ ಸಹಾಯ ಮಾಡಲಿದೆ. ಭವಿಷ್ಯದಲ್ಲಿ ಯಾವುದೇ ರೀತಿಯ ಕೋವಿಡ್ ಅಲೆಗಳು ಎದುರಾದರೂ ಇದು ನಮ್ಮನ್ನು ರಕ್ಷಣೆ ಮಾಡಲಿದೆ ಎಂದು ಹೇಳಿದ್ದಾರೆ.

ಮುಂದೆ ಎದುರಾಗುವ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಹಾಗೂ ಅದನ್ನು ಅರ್ಥ ಮಾಡಿಕೊಳ್ಳಲು, ಕಠಿಣ ಕ್ರಮಗಳ ಅತ್ಯಗತ್ಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಲಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ ಅಂತ್ಯಗೊಂಡಿದೆ ಎಂದು ಘೋಷಿಸುವವರೆಗೆ ಕೋವಿಡ್ ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿದೆ. ಪ್ರಮುಖವಾಗಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಿದ್ದಾರೆ

See also  ನಡುರಸ್ತೆಯಲ್ಲೇ ರೌಡಿಶೀಟರ್ ಮಂಜುನಾಥ್ ಬರ್ಬರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು