News Kannada
Sunday, December 04 2022

ಬೆಂಗಳೂರು ನಗರ

ಬುಡಕಟ್ಟು ಸಮುದಾಯದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದ : ಸಚಿವ ಶ್ರೀರಾಮುಲು

Photo Credit :

ಬೆಂಗಳೂರು,ಮಾ.25 : ಚಾಮರಾಜನಗರ ಜಿಲ್ಲೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದ್ದು, ವಸತಿ ಶಾಲೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು.

ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‍ನ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಭಾಗದಲ್ಲಿ 40 ವಾಡಿಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯದ ಜನರಿಗಾಗಿ ಪೌಷ್ಟಿಕಾಂಶ ಹೆಚ್ಚಳಕ್ಕಾಗಿ ಪಡಿತರ ವಿತರಣೆ ಯೋಜನೆಯನ್ನು ರೂಪಿಸಲಾಗಿದೆ. ಅದರಲ್ಲಿ ಮಾಸಿಕ ಬೇಡಿಕೆಗೆ ಅನುಗುಣವಾಗಿ ಆಹಾರ ಪದಾರ್ಥಗಳನ್ನು ಒದಗಿಸಲಾಗುತ್ತಿದೆ.

ಸುತ್ತಮುತ್ತಲು ಸುಮಾರು 25ಕ್ಕೂ ಹೆಚ್ಚು ವಸತಿಶಾಲೆಗಳಿವೆ. ಸಾರಿಗೆ ಸಂಪರ್ಕ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಬಾಕಿ ಇರುವ ಅನುದಾನವನ್ನು ಶೀಘ್ರವೇ ಖರ್ಚು ಮಾಡಲಾಗುತ್ತದೆ ಎಂದು ತಿಳಿಸಿದರು

See also  ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 270 ಹೊಸ ಕೊರೋನಾ ಪ್ರಕರಣ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು