News Kannada
Tuesday, November 29 2022

ಬೆಂಗಳೂರು ನಗರ

ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು; ಹೆಚ್.ಡಿ.ಕುಮಾರಸ್ವಾಮಿ - 1 min read

Photo Credit :

ಬೆಂಗಳೂರು : ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿದ್ಯಾರ್ಥಿಗಳು ಶುಭಾಶಯ ಕೋರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ ಎಂದು ಹೇಳಿದ್ದಾರೆ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ತ್ವೇಷಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ ಎಂದಿದ್ದಾರೆ.

ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ʼಬೇಟಿ ಬಚಾವೋ, ಬೇಟಿ ಪಡಾವೋʼ ಕಾರ್ಯಕ್ರಮ ಕೇವಲ ಕಾಗದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಹೇಳಿದ್ದಾರೆ.

See also  ಆಡಳಿತ ಮಂಡಳಿಯ ಸಮವಸ್ತ್ರವೇ ಅಂತಿಮ : ರಾಜ್ಯ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು