News Kannada
Wednesday, December 07 2022

ಬೆಂಗಳೂರು ನಗರ

ಟ್ರಾನ್ಸ್​ಫಾರ್ಮರ್​ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳು ಬಂಧನ

Photo Credit :

ಬೆಂಗಳೂರು : ಇತ್ತೀಚೆಗೆ ಟ್ರಾನ್ಸ್​ಫಾರ್ಮರ್​ ಸ್ಫೋಟಕ್ಕೆ ತಂದೆ-ಮಗಳು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂ ಸಂಸ್ಥೆಯ ಸಹಾಯಕ ಅಭಿಯಂತರ(ಎಇ) ದಿನೇಶ್, ಕಿರಿಯ ಅಭಿಯಂತರ (ಜೆಇ) ಮಹಾಂತೇಶ್ ಬಂಧಿತ ಆರೋಪಿಗಳು.

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಪ್ರಕರಣದಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಾ.23ರಂದು ನಿಶ್ಚಿತಾರ್ಥಕ್ಕೆ ಹಾಲ್ ಬುಕ್ ಮಾಡಿ ಬರುತ್ತಿದ್ದಾಗ ಮಂಗನಹಳ್ಳಿಯಲ್ಲಿ ಮಾರ್ಗಮಧ್ಯೆ ವಿದ್ಯುತ್ ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡಿದ್ದು, ಶಿವರಾಜ್ (55) ಹಾಗೂ ಅವರ ಪುತ್ರಿ ಚೈತನ್ಯ (18) ಇಬ್ಬರಿಗೂ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು, ಅಲ್ಲಿ ತಂದೆ ಸಾವಿಗೀಡಾದರು. ಬಳಿಕ ಮರುದಿನ ಪುತ್ರಿ ಕೂಡ ಮೃತಪಟ್ಟಿದ್ದರು.

ಟ್ರಾನ್ಸ್​ಫಾರ್ಮರ್​ನಲ್ಲಿ ಸಮಸ್ಯೆ ಕಂಡುಬಂದಿದೆ ಎಂದು ಸ್ಥಳೀಯರು ಕರೆ ಮಾಡಿ ಹೇಳಿದ್ದರೂ ಬೆಸ್ಕಾಂ ಸಿಬ್ಬಂದಿ ಕ್ರಮಕೈಗೊಂಡಿಲ್ಲ. ಅದಾದ ಸ್ವಲ್ಪ ಹೊತ್ತಿನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತಕ್ಕೆ ಬೆಸ್ಕಾಂ ಅಧಿಕಾರಿ-ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಸಂಬಂಧಿಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

See also  ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುವ ವೇಳೆ ಭಾವುಕರಾದ ಸ್ಪೀಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು