News Kannada
Friday, December 09 2022

ಬೆಂಗಳೂರು ನಗರ

ಸರಕಾರದ ಗೋಶಾಲೆಗಳು ಕೇವಲ ಕಾಗದದ ಮೇಲೆ ಇದ್ದಂತಿದೆ; ಹೈಕೋರ್ಟ್‌

Photo Credit : IANS

ಬೆಂಗಳೂರು : ಸರಕಾರದ ಗೋಶಾಲೆಗಳು ಕೇವಲ ಕಾಗದದ ಮೇಲೆ ಇದ್ದಂತಿದೆ ಎಂದು ಹೈಕೋರ್ಟ್‌ ತೀಕ್ಷ್ಣವಾಗಿ ಹೇಳಿದೆ. ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಮತ್ತು ಈಗಿರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ ಹಾಗೂ ನ್ಯಾ| ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಗೋಶಾಲೆ ನಿರ್ಮಾಣಕ್ಕೆ ಪ್ರತಿ ಜಿಲ್ಲೆಯಲ್ಲೂ ಸ್ಥಳ ಗುರುತಿಸಲಾಗಿದೆ. ಬಜೆಟ್‌ನಲ್ಲಿ ಹಣ ಸಹ ಮಂಜೂರು ಮಾಡಲಾಗಿದೆ ಎಂದು ಸರಕಾರದ ಪರ ವಕೀಲರು ತಿಳಿಸಿದರು. ಆಗ ಎಲ್ಲೆಲ್ಲಿ, ಎಷ್ಟು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಸರಕಾರದ ಪರ ವಕೀಲರಿಂದ ಸಮರ್ಪಕ ಉತ್ತರ ಬಂದಿಲ್ಲ.

ಇದರಿಂದ ಬೇಸರಗೊಂಡ ಮುಖ್ಯ ನ್ಯಾಯಮೂರ್ತಿಗಳು, ನೀವು ಗೋಶಾಲೆ ಎಲ್ಲಿದೆ ಎಂದರೆ ಬರಿ ಜಮೀನು ಗುರುತಿಸಿದ್ದೇವೆ, ಹಣ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತೀರಿ. ಎಲ್ಲೆಡೆ ಕಾರ್ಯ ನಿರ್ವಹಿಸುತ್ತಿವೆ, ಎಲ್ಲೆಲ್ಲಿ ನಿರ್ಮಾಣ ಮಾಡುತ್ತಿದ್ದೀರಿ, ಎಲ್ಲಿ ಅಭಿವೃದ್ಧಿಪಡಿಸಿದ್ದೀರಿ ಎಂದರೆ ನಿಮ್ಮ ಬಳಿ ಉತ್ತರವೇ ಇಲ್ಲ. ಹಾಗಾಗಿ, ನಿಮ್ಮ ಗೋಶಾಲೆಯೆಲ್ಲಾ ಬರೀ ಕಾಗದದ ಮೇಲೆ ಇದ್ದಂತಿದೆ’ ಎಂದು ಹೇಳಿದರು.

ಸಮರ್ಪಕ ಮಾಹಿತಿ ನೀಡುವಂತೆ ಸರಕಾರಕ್ಕೆ ತಾಕೀತು ಮಾಡಿ ವಿಚಾರಣೆಯನ್ನು ಮುಂದೂಡಲಾಯಿತು.

See also  ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ; ಎಂಪಿ ರೇಣುಕಾಚಾರ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು