News Kannada
Sunday, November 27 2022

ಬೆಂಗಳೂರು ನಗರ

ರಾಜ್ಯಕ್ಕೆ ಅಮಿತ್ ಶಾ ಆಗಮನ: ಕೋರ್ ಕಮಿಟಿ ಸಭೆಯಲ್ಲಿ ಭಾಗಿ - 1 min read

Photo Credit : Twitter

ಬೆಂಗಳೂರು:  ರಾಜ್ಯಕ್ಕೆ ಮಾರ್ಚ್ 31ರ ರಾತ್ರಿ  ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಕರ್ನಾಟಕದಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ಸಿದ್ದಗಂಗಾ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಲ್ಲದೇ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.ಮಾರ್ಚ್ 31 ರಂದು ಬೆಂಗಳೂರಿಗೆ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಏಪ್ರಿಲ್ 1ರಂದು ಹೆಚ್​​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ.

ಮಧ್ಯಾಹ್ನ 2.10ಕ್ಕೆ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿ, ಸತ್ಯ ಸಾಯಿ ಗ್ರಾಮದ 400 ಬೆಡ್‌ಗಳ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. 4 ಗಂಟೆಗೆ ಅರಮನೆ ಮೈದಾನಕ್ಕೆ ಆಗಮಿಸಲಿರುವ ಶಾ, ಸಹಕಾರ ಇಲಾಖೆಯ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6 ಗಂಟೆಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ರಾತ್ರಿ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸ್ ಆಗಲಿದ್ದಾರೆ.

ಮಾರ್ಚ್ 31 ರಂದು ಬೆಂಗಳೂರಿಗೆ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಏಪ್ರಿಲ್ 1ರಂದು ಹೆಚ್​​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ಸಿದ್ದಗಂಗಾ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

See also  ರಾಜ್ಯದಲ್ಲಿ ಕೊರೋನಾ ನಾಲ್ಕನೇ ಅಲೆ ಬಂದಿಲ್ಲ ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12429
Bhavana S.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು