News Kannada
Tuesday, November 29 2022

ಬೆಂಗಳೂರು ನಗರ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 34 ಮಂದಿಗೆ ಕೊರೋನಾ ಸೋಂಕು ದೃಢ - 1 min read

Photo Credit : IANS

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 34 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,45,610ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,054 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 31 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,81,719ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 79 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,03,998ಕ್ಕೆ ಏರಿಕೆಯಾಗಿದೆ. ಇನ್ನು 1,516 ಸಕ್ರಿಯ ಪ್ರಕರಣಗಳಿವೆ.

See also  ನಗರ, ಪಟ್ಟಣ ವಾಸಿಗಳು ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ : ಡಿ.ಕೆ. ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು