News Kannada
Friday, October 07 2022

ಬೆಂಗಳೂರು ನಗರ

ಆಜಾನ್ ವಿಚಾರದಲ್ಲಿ ಬಿಜೆಪಿ ಸರಕಾರ ಹೊಸ ಕಾನೂನು ತಂದಿಲ್ಲ: ಬಸವರಾಜ ಬೊಮ್ಮಾಯಿ - 1 min read

ಸಿಎಂ ಬಸವರಾಜ ಬೊಮ್ಮಾಯಿ
Photo Credit :

ಬೆಂಗಳೂರು: ಆಜಾನ್ ವಿಚಾರದಲ್ಲಿ ಬಿಜೆಪಿ ಸರಕಾರ ಹೊಸ ಕಾನೂನು ತಂದಿಲ್ಲ, ಅನಗತ್ಯವಾಗಿ ಈ ವಿಚಾರವಾಗಿ ಗೊಂದಲ ಸೃಷ್ಟಿ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಿಂದು-ಮುಸ್ಲಿಂ ಧಾರ್ಮಿಕ ವಿಚಾರಗಳ ಬಗ್ಗೆ ನಡೆಯುತ್ತಿರುವ ವಿವಾದಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಶಾಂತಿ-ಸುವ್ಯವಸ್ಥೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಸರಕಾರದ ದೃಷ್ಟಿಯಲ್ಲಿ ಎಲ್ಲ ಜಾತಿ-ಧರ್ಮದವರು ಒಂದೇ ಎಂದರು.

ಹಲವಾರು ವರ್ಷಗಳಿಂದ ಈ ವಿಚಾರ ಚರ್ಚೆಯಲ್ಲಿವೆ, ಹೊಸದೇನೂ ಅಲ್ಲ. ಕೆಲವು ಆದೇಶಗಳು 2001, 2002, ಹೈಕೋರ್ಟ್ ತೀರ್ಪು ಆಧಾರದ ಮೇಲೆ ಆಗಿವೆ. ನಾವು ಇಂದಿನ ಬಿಜೆಪಿ ಸರಕಾರ ಹೊಸ ಆದೇಶ ಮಾಡಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಧರ್ಮವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಸಮಾಜ ಅಥವಾ ಸಂಘಟನೆ ಕಾನೂನು ಕೈಗೆತ್ತಿಕೊಳ್ಳದಂತೆ ಕಾನೂನು ಸುವ್ಯವಸ್ಥೆಗೆ ಕ್ರಮ ಕೈಗೊಳ್ಳುತ್ತೇವೆ. ದೇವಸ್ಥಾನ, ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಹೈಕೋರ್ಟ್ ಆದೇಶವಿದೆ. ಎಷ್ಟು ಡೆಸಿಮಲ್ ವರೆಗೆ ಬಳಸಬೇಕು ಹಿಂದಿನ ಆದೇಶವಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅದನ್ನು ಹಂತಹಂತವಾಗಿ ಜಾರಿಗೊಳಿಸುವ ಕೆಲಸ ನಡೆಯುತ್ತಿದೆ ಎಂದರು.

See also  ಜೆಡಿಎಸ್‌ ಅಧಿಕಾರಕ್ಕೆ ಬಂದರೆ ನೀಟ್‌ ವಿರುದ್ಧ ನಿರ್ಣಯ: ಎಚ್. ಡಿ. ಕುಮಾರಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು