News Kannada
Monday, September 26 2022

ಬೆಂಗಳೂರು ನಗರ

ಬಸವ ಜಂಯತಿ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ - 1 min read

Photo Credit :

ಬೆಂಗಳೂರು : 12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ಬಸವ ಜಯಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು. “ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದ್ದಾರೆ.

ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ಹರ್ಡೇಕರ ಮಂಜಪ್ಪನವರು 1913ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿಯ ಆಚರಣೆ ಶುರು ಮಾಡಲು ನಿಶ್ಚಯಿಸಿದರು.

ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ಬಸವ ಜಯಂತಿ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕ ತಿಳಿಯದಿರುವುದು ದೊಡ್ಡ ಗೊಂದಲ ಸೃಷ್ಟಿಯಾಗಿತ್ತು. ಆಗ ಮುರುಘಾಮಠದ ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಕ್ಷಯ ತದಿಗೆಯಂದು ಬಸವ ಜಯಂತಿ ಆಚರಿಸಲು ತಿಳಿಸಿದರು. ಅಂದಿನಿಂದಲೂ ಅಕ್ಷಯ ತೃತೀಯದಂದು ಬಸವ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ.

ಈ ದಿನ ಎಲ್ಲ ಬಸವಣ್ಣನ ಬೆಂಬಲಿಗರು ಅವರ ಸಂದೇಶಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಸಮಾಜಕ್ಕೆ ಬಸವಣ್ಣನವರು ನೀಡಿದ ಕೊಡುಗೆಗಳನ್ನು ಸ್ಮರಿಸುತ್ತಾರೆ. ಜೊತೆಗೆ ಬಸವಣ್ಣನ ವಚನಗಳು ಎಲ್ಲೆಡೆ ಹರಿದಾಡುತ್ತವೆ.

See also  ಮೊದಲು ಬಿಜೆಪಿಯವರು ರಾಜೀನಾಮೆ ನೀಡಲಿ: ಸಿದ್ಧರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು