News Kannada
Monday, February 06 2023

ಬೆಂಗಳೂರು ನಗರ

ಆಜಾನ್– ಭಜನೆ ಸಂಘರ್ಷ ಹಿನ್ನೆಲೆ ಮಾರ್ಗಸೂಚಿ ಹೊರಡಿಸಲು ನಿರ್ಧಾರ

Photo Credit :

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ, ಕಾನೂನುಬಾಹಿರವಾಗಿ ಲೌಡ್ ಸ್ಪೀಕರ್ ಅಳವಡಿಸಿರುವವರು ಅರ್ಜಿ ಹಾಕಿ ಅನುಮತಿ ಪಡೆಯಬೇಕು. ಅದಕ್ಕಾಗಿ ಅವರಿಗೆ 15 ದಿನ ಅಥವಾ 1 ತಿಂಗಳು ಕಾಲಾವಕಾಶ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಆಜಾನ್ – ಭಜನೆ ಸಂಘರ್ಷ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆ ಸಂಬಂಧ ಮಾರ್ಗಸೂಚಿ ಹೊರಡಿಸಲು ನಿರ್ಧರಿಸಲಾಗಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಜಾನ್ – ಭಜನೆ ಸಂಘರ್ಷದ ಬಗ್ಗೆ ತುರ್ತು ಸಭೆ ನಡೆಸಿದರು.‌

ಸಭೆಯಲ್ಲಿ ಡಿಜಿ ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ, ಕಾನೂನು ಬಾಹಿರವಾಗಿ ಲೌಡ್ ಸ್ಪೀಕರ್ ಅಳವಡಿಸಿರುವವರು ಅರ್ಜಿ ಹಾಕಿ ಅನುಮತಿ ಪಡೆಯಬೇಕು. ಅದಕ್ಕಾಗಿ ಅವರಿಗೆ 15 ದಿನ ಅಥವಾ 1 ತಿಂಗಳು ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ಅನುಮತಿ ಪಡೆಯದೇ ಇದ್ದರೆ ಅಂತಹ ಧ್ವನಿವರ್ಧಕಗಳ ತೆರವು ಮಾಡಲಾಗುವುದು.

ಸಾರ್ವಜನಿಕ ಕಾರ್ಯಕ್ರಮಗಳಿಗೂ ಇದು ಅನ್ವಯಿಸಲಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.

See also  ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು