News Kannada
Saturday, December 10 2022

ಬೆಂಗಳೂರು ನಗರ

ಮಳೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡುವಂತೆ ಡಿಸಿಗಳಿಗೆ ಸೂಚನೆ ನೀಡಿದ ಸಿಎಂ

Photo Credit :

ಬೆಂಗಳೂರು,ಮೇ.21: ರಾಜ್ಯದ ನಾನಾಕಡೆ ಕಳೆದ ನಾಲ್ಕು ದಿನಗಳಿಂದ ಸುರಿದ ಭಾರೀ ಮಳೆಗೆ ಅನಾಹುತವಾಗಿರುವ ಕಡೆ ತಕ್ಷಣವೇ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಅನೇಕ ಕಡೆ ಭಾರೀ ಮಳೆಯಾಗಿದೆ. ಬೆಳೆದು ನಿಂತ ಬೆಳೆಗಳು ಕೊಚ್ಚಿಹೋಗಿವೆ. ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚಿಸಿರುವುದಾಗಿ ತಿಳಿಸಿದರು.

ಅಗತ್ಯವಿರುವ ಕಡೆ ಗಂಜಿಕೇಂದ್ರಗಳನ್ನು ತೆರೆಯುವುದು, ತಗ್ಗು ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುವುದು, ಜನರಿಗೆ ಅಗತ್ಯವಿರುವ ಆಹಾರ, ತಿಂಡಿ-ತಿನಿಸು, ಹೊದಿಕೆಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಸೂಚನೆ ನೀಡಿದ್ದೇನೆ ಎಂದರು. ಕಂದಾಯ ಸಚಿವರಾದ ಆರ್.ಅಶೋಕ್ ಅವರು ಎಲ್ಲ ಜಿಲ್ಲಾಧಿಕಾರಿಗಳ ಜತೆ ಈಗಾಗಲೇ ವಿಡಿಯೋ ಕಾನರೆನ್ಸ್ ನಡೆಸಿದ್ದಾರೆ.

ಜಿಲ್ಲಾಧಿಕಾರಿಗಳು ತಮ್ಮ ಖಜಾನೆಯಲ್ಲಿರುವ ಹಣವನ್ನು ಪರಿಹಾರ ನಿಗೆ ಬಳಸಿಕೊಳ್ಳಬೇಕು. ಇಲ್ಲಸಲ್ಲದ ನೆಪ ನೀಡಿ ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಅಶೋಕ್ ಅವರು ನಿರಂತರವಾಗಿ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲ ಅಧಿಕಾರಿಗಳ ಜತೆ ಸತತ ಸಂಪರ್ಕದಲ್ಲಿದ್ದಾರೆ. ಯಾರೂ ಕೂಡ ಅನಗತ್ಯವಾಗಿ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದರು.

ಉಸ್ತುವಾರಿ ಸಚಿವರುಗಳು ಕೂಡ ತಕ್ಷಣವೇ ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಸೂಚನೆ ನೀಡಿದ್ದೇನೆ. ಇದರಂತೆ ಎಲ್ಲ ಸಚಿವರೂ ಈಗಾಗಲೇ ತೆರಳಿದ್ದಾರೆ. ರಾಜ್ಯದಲ್ಲಿ ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಬಳಸಿಕೊಂಡು ಪರಿಹಾರ ಕಾರ್ಯವನ್ನು ಸಮರೋಪಾದಿಯಲ್ಲಿ ಮಾಡಲಿದ್ದೇವೆ ಎಂದು ಹೇಳಿದರು.

See also  ವಿಧಾನ ಪರಿಷತ್ ಚುನಾವಣೆಗೆ ಸಿದ್ಧತೆ ಕೈಗೊಳ್ಳಲು ಚಿತ್ರದುರ್ಗ ಜಿಲ್ಲಾಧಿಕಾರಿ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು