News Kannada
Monday, November 28 2022

ಬೆಂಗಳೂರು ನಗರ

ವಾಯುಭಾರ ಕುಸಿತದ ಪರಿಣಾಮ: ಇನ್ನೆರಡು ದಿನ ಮಳೆ ಮುಂದುವರೆಯುವ ಸಾಧ್ಯತೆ - 1 min read

Bengaluru: A depression in the Bay of Bengal, rains lash Karnataka again
Photo Credit :

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ, ಇನ್ನೆರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿಯ ಹಲವು ಕಡೆಗಳಲ್ಲಿ ಹಾಗು ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ,ಉಡುಪಿ, ಉತ್ತರ ಕನ್ನಡ , ಕೊಡಗು ಜಿಲ್ಲೆಯ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನ ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ಕರಾವಳಿಯ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

See also  ಕಾನೂನು ಸುವ್ಯವಸ್ಥೆ ಕಾಪಾಡುವುದು ಗೊತ್ತಿದೆ, ವಿರೋಧ ಪಕ್ಷಗಳ ಪಾಠ ಅಗತ್ಯ ಇಲ್ಲ: ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು