News Kannada
Thursday, September 29 2022

ಬೆಂಗಳೂರು ನಗರ

ಪೆಟ್ರೋಲ್ ಬಂಕ್ ಮಾಲೀಕರಿಂದ ಮೇ.31ರಂದು ಪ್ರತಿಭಟನೆ - 1 min read

Photo Credit :

ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳ ದರ ದಿಢೀರ್ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಗೆ ನಷ್ಟ ಉಂಟಾಗಿದ್ದು, ಇದರಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ.31 ರಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.

ಮೇ.31ರಂದು ಡಿಪೋಗಳಿಂದ ತೈಲ ಖರೀದಿಸದೆ ಪ್ರತಿಭಟನೆ ನಡೆಸಲು ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿದ ಒಕ್ಕೂಟದ ಅಧ್ಯಕ್ಷ ಕೆ.ಎಂ.ಬಸವೇಗೌಡ ಅವರು, ಕೇಂದ್ರ ಸರ್ಕಾರ ಕಳೆದ ವಾರ ದಿಢೀರ್ ರೂ.10ರವರೆಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ದರವನ್ನು ಕಡಿತ ಮಾಡಿತ್ತು. ಇದರಿಂದ ಹಿಂದಿನ ದಿನವೇ ಸಾವಿರಾರು ಲೀಟರ್ ತೈಲ ಖರೀದಿಸಿಟ್ಟಿದ್ದ ಪ್ರತಿ ಬಂಕ್ ಗಳಿಗೆ ಕನಿಷ್ಟ ರೂ.5 ರಿಂದ 25 ಲಕ್ಷದವರೆಗೂ ನಷ್ಟವಾಗಿದೆ. ಈ ನಷ್ಟವನ್ನು ಕೇಂದ್ರ ಸರ್ಕಾರ ಭರಿಸಬೇಕು ಎಂದು ಒತ್ತಾಯಿಸಲು 1 ದಿನ ಡಿಪೋಗಳಿಂದ ತೈಲ ಖರೀದಿಸದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸಿದರೆ ಪೆಟ್ರೋಲ್ ಬಂಕ್‌ಗಳ ಮುಂದೆ ನೋ ಸ್ಟಾಕ್ ಫಲಕ ಹಾಕಲಾಗುತ್ತದೆ. ಆದ್ದರಿಂದ ಪ್ರತಿಭಟನೆ ನಡೆಸುವ ಮೇ 31ರ ಸೋಮವಾರ ಪೆಟ್ರೋಲ್, ಡೀಸೆಲ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.

See also  ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಕಾನೂನು ಕಡ್ಡಾಯ ಜಾರಿ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು