News Kannada
Thursday, July 07 2022

ಬೆಂಗಳೂರು ನಗರ

ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್: ನಾಳೆ ನಾಮಪತ್ರ ಸಲ್ಲಿಕೆ - 1 min read

Photo Credit :

ಬೆಂಗಳೂರು: ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅಭಿನಂದಿಸಲಾಯಿತು.

ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಪ್ರಕಟಗೊಂಡ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಸಚಿವೆ ಆಗಮಿಸಿದರು. ವಿಧಾನಪರಿಷತ್ ಸದಸ್ಯೆ ತೇಜಸ್ವಿನಿಗೌಡ ಹಾರ ಹಾಕಿ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸತೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಮುಖ್ಯ ವಕ್ತಾರ ಎಂಜಿ ಮಹೇಶ್, ಶಾಸಕ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಹಾಗೂ ಇತರರು ಕೇಂದ್ರ ಸಚಿವರಿಗೆ ಶುಭ ಕೋರಿದರು.

ನಾಳೆ ನಾಮಪತ್ರ ಸಲ್ಲಿಕೆ :
ರಾಜ್ಯಸಭೆಗೆ ಬಿಜೆಪಿಯಿಂದ ಎರಡನೇ ಬಾರಿ ಟಿಕೆಟ್ ಪಡೆದುಕೊಂಡ ನಿರ್ಮಲಾ ಸೀತಾರಾಮನ್ ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಜೊತೆಗೆ ನಟ ಜಗ್ಗೇಶ್ ಕೂಡ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

See also  ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಏರಿಕೆ, ಇಂದು 2479 ಜನರಿಗೆ ಪಾಸಿಟಿವ್ ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು