News Kannada
Wednesday, July 06 2022

ಸಾಂಡಲ್ ವುಡ್

ದಿನನಿತ್ಯ ಜೀವನದಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳಿ: ತಾರಾಅನೂರಾಧ - 1 min read

Photo Credit :

ಬೆಂಗಳೂರು, ಜೂ. 20: ದಿನನಿತ್ಯ ಜೀವನದಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳುವ ಮೂಲಕ ಜೀವನ ಉತ್ಸಾಹವನ್ನು ಹೆಚ್ಚಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಎಲ್ಲರೂ ನಮ್ಮ ಪ್ರಾಚೀನ ಪರಂಪರೆಯ ಪ್ರಮುಖ ಕೊಡುಗೆಯಾಗಿರುವ ಯೋಗವನ್ನು ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ತಾರಾಅನೂರಾಧ ಅವರು ಕರೆ ನೀಡಿದರು.

ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಇಂದು ನಗರದ ವನ ವಿಕಾಸ ಕಟ್ಟಡದ ಎದುರು ಸಾಮೂಹಿಕ ಯೋಗ ಅಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯೋಗ ದ ವಿವಿಧ ಆಸನಗಳ ಪ್ರದರ್ಶಿಸಿ ನಂತರ ಮಾತನಾಡಿದರು. ಯೋಗ ಭಾರತೀಯ ಪರಂಪರೆಯ ಪ್ರಮುಖವಾದಂತಹ ಕೊಡುಗೆ. ಈ ಕೊಡುಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದ ವಿಶ್ವವ್ಯಾಪಿಯಾಗಿದೆ. ಆದರೆ ಬಹಳಷ್ಟು ಭಾರತೀಯರು ಇನ್ನೂವರೆಗೂ ತಮ್ಮ ಜೀವನದ ಭಾಗವನ್ನಾಗಿ ಯೋಗಾಭ್ಯಾಸವನ್ನು ಅಳವಡಿಸಿಕೊಂಡಿಲ್ಲ. ಯೋಗ ಅಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಾವುಗಳು ಜೀವನದಲ್ಲಿ ಉತ್ಸಾಹವನ್ನು ಪಡೆದುಕೊಳ್ಳಬಹುದಾಗಿದೆ. ದೈಹಿಕವಾಗಿ ಮಾನಸಿಕವಾಗಿ ಶಕ್ತಿಯನ್ನು ಮತ್ತು ನವಚೈತನ್ಯವನ್ನು ನೀಡುವಂತಹ ಯೋಗವನ್ನು ಪ್ರತಿನಿತ್ಯ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಜ್ಯದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್ ಕೆ ಸಿಂಗ್ ಮಾತನಾಡಿ ಯೋಗಾಭ್ಯಾಸದಿಂದ ದೇಹ ಫ್ಲೆಕ್ಸಿಬಲ್ ಆಗುತ್ತದೆ. ದೇಹ ಆಘಾತಗಳಿಗೆ ಸಕಾರಾತ್ಮಕ ವಾಗಿ ಪ್ರತಿಕ್ರಿಯಿಸುವ ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಪ್ರಾಣಾಯಾಮ ನಮ್ಮ ಆಂತರಿಕ ಅಂಗಾಂಗಗಳಿಗೆ ಚೈತನ್ಯ ತುಂಬುತ್ತದೆ ಎಂದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅರಣ್ಯ ಅಭಿವೃದ್ಧಿ ನಿಗಮ ದ ವ್ಯವಸ್ಥಾಪಕ ನಿರ್ದೇಶಕ ಶ್ರೀಮತಿ ರಾಧಾದೇವಿ ಹಾಗೂ ಹಿರಿಯ ಅಧಿಕಾರಿಗಳು ಮತ್ತು ನೌಕರರು ಪಾಲ್ಗೊಂಡಿದ್ದರು.

See also  ಮೇಕೆದಾಟು ಪಾದಯಾತ್ರೆ ಬಳಿಕ ,ಮುಂದಿನ ದಿನಗಳಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ಮಾಡುತ್ತೇವೆ. : ಮಾಜಿ ಸಿಎಂ ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು