ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬೈಯ್ಯಪ್ಪನಹಳ್ಳಿಯ ಹವಾನಿಯಂತ್ರಿತ ರೈಲು ನಿಲ್ದಾಣ ಉದ್ಘಾಟನೆ ಮಾಡಿದರು.
ಇದರ ಜೊತೆಗೆ ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆ ಮತ್ತು 6ರಾಷ್ಟ್ರೀಯ ಹೆದ್ದಾರಿ ಯೋಜನೆ ಮತ್ತು ಲಾಜಿಸ್ಟಿಕ್ ಪಾರ್ಕ್‌ಗೆ ಪ್ರಧಾನಿ ಶಂಕುಸ್ಥಾಪನೆ ಮಾಡಿದರು.
ಬೆಂಗಳೂರಿನಲ್ಲಿ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ (BSRP) ಗೆ ಪ್ರಧಾನಮಂತ್ರಿಯವರು ಅಡಿಪಾಯ ಹಾಕಿದರು.
15,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಯೋಜನೆಯು ಒಟ್ಟು 148 ಕಿಮೀ ಉದ್ದದ 4 ಕಾರಿಡಾರ್‌ಗಳನ್ನು ಹೊಂದಿದೆ. ಯಶವಂತಪುರ ಜಂಕ್ಷನ್ ರೈಲು ನಿಲ್ದಾಣವನ್ನು ಕ್ರಮವಾಗಿ ಸುಮಾರು 500 ಕೋಟಿ ಮತ್ತು 375 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಯಲಹಂಕದಿಂದ ಹೈದ್ರಾಬಾದ್ ಗೆ ಡಬಲಿಂಗ್ ಲೈನ್, ಅರಸಿಕೆರೆ ಮತ್ತು ತುಮಕೂರು ನಡುವಿನ ಕೊಂಕಣ ರೇಲ್ವೇ ವಿದ್ಯುದೀಕರಣ, ತುಮಕೂರಿನ ಬಳಿ 5 ರಾಜ್ಯಗಳನ್ನು ಸಂಪರ್ಕಿಸುವ ಬೃಹತ್ ಲಾಜಿಸ್ಟಕ್ ಪಾರ್ಕ್ ಸ್ಯಾಟಲಾಟ್ ಟೌನ್ ರಿಂಗ್ ರೋಡ್ ಮೂಲಕ ನಾಲ್ಕು ಸ್ಯಾಟಲೈಟ್ ನಗರಗಳನ್ನು ಸಂಪರ್ಕಿಸುವ 2,000 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರತಿ ಯೋಜನೆಯ ಕುರಿತಾದ ಮಾಹಿತಿಯನ್ನು ಕಿರುಚಿತ್ರಗಳ ಮೂಲಕ ಪ್ರಸ್ತುತಪಡಿಸಲಾಯಿತು.
Bengaluru | PM Narendra Modi inaugurates & lays foundation stone for rail and road infrastructure projects worth over Rs 28,000 crores in Karnataka pic.twitter.com/OnR9xqXPAM
— ANI (@ANI) June 20, 2022