ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪತಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ವ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಯಶವಂತಪುರದಲ್ಲಿ ನಡೆದಿದೆ. ಅನಸೂಯ (42) ಎಂಬ ಪತ್ನಿಯನ್ನು ಕೊಲೆಗೈದ ಬಳಿಕ, 13 ವರ್ಷದ ಮಗಳನ್ನು ಕೊಲೆಮಾಡಲು ಆರೋಪಿ ತಾನೇಂದ್ರ ಯತ್ನಿಸಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಕೊಲೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ವೇಳೆ ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಆತನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲೇ ಪತಿಯಿಂದಲೇ ಪತ್ನಿಯನ್ನು ಕೊಲೆ ಮಾಡಿ ಘನಘೋರ ಕೃತ್ಯ ಬೆಳಕಿಗೆ ಬಂದಿದೆ.