News Kannada
Tuesday, July 05 2022

ಬೆಂಗಳೂರು ನಗರ

ಐಕಿಯಾ ಪೀಠೋಪಕರಣ ಮಳಿಗೆಯನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ - 1 min read

Photo Credit : Twitter

ಬೆಂಗಳೂರು, ಜೂ. 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಮಳಿಗೆಯನ್ನು ಬೆಂಗಳೂರಿನ ನಾಗಸಂದ್ರದಲ್ಲಿ ಬುಧವಾರ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , “ದಾವೋಸ್‌ನಲ್ಲಿ ಅಂತಾರಾಷ್ಟ್ರೀಯ ಐಕಿಯಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿತ್ತು. ಸುಮಾರು 3000 ಕೋಟಿ ಹೂಡಿಕೆ ಮಾಡಲು ತೀರ್ಮಾನ ಮಾಡಿದ್ದಾರೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳಿಗೆ ಪ್ರಾರಂಭವಾದುದರಿಂದ ಸ್ಥಳೀಯ ಕುಶಲಕರ್ಮಿಗಳಾದ ಬಡಗಿಗಳು, ಶಿಲ್ಪಕಾರರು, ಉತ್ಪಾದಕರಿಗೆ ಅವಕಾಶ ದೊರೆಯುತ್ತದೆ. ಶೇ 27 ರಷ್ಟು ಅವಕಾಶ ನೀಡುವುದಾಗಿ ಹೇಳಿದ್ದಾರೆ. ಅದನ್ನು ಹೆಚ್ಚಿಗೆ ಮಾಡುವಂತೆ ಮನವಿ ಮಾಡಲಾಗಿದೆ. ಇನ್ನಷ್ಟು ಮಳಿಗೆಗಳನ್ನು ತೆಗೆಯಬೇಕು. ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಬೆಂಗಳೂರಿಗೆ ಆ ಸಾಮರ್ಥ್ಯವಿದೆ. ಬೆಂಗಳೂರು ದಕ್ಷಿಣದಲ್ಲಿ ಮಳಿಗೆ ತೆರೆಯಲು ತಿಳಿಸಲಾಗಿದೆ” ಎಂದರು.

ಇಲ್ಲಿ ಉತ್ತಮ ಗುಣಮಟ್ಟದ, ಬಾಳಿಕೆ ಬರುವ ಹಾಗೂ ಕೈಗೆಟುಕುವ ಬೆಲೆಯ ಪೀಠೋಪಕರಣಗಳಿವೆ. ಸಾಮಾನ್ಯ ಜನರಿಗೆ, ಮಧ್ಯಮ ವರ್ಗದವರ ಕನಸು ನನಸಾಗಿಸಲು ಇದು ಸಹಕಾರಿಯಾಗಿದೆ ಎಂದರು.

ವೇಳೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್, ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್ ಪುಲ್ವೇಲರ್, ಐಕಿಯಾ ಕರ್ನಾಟಕದ ಮಾರುಕಟ್ಟೆ ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರು ಉಪಸ್ಥಿತರಿದ್ದರು.

See also  ವಿಶ್ವದಲ್ಲಿ ನಾಲ್ಕನೇ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ: ಸಚಿವ ಡಾ. ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು