ಬೆಂಗಳೂರು: ಕೋಲಾರದ ಮಾಜಿ ಸಂಸದ ಹಾಗೂ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರಲು ಮುಂದಾಗಿದ್ದಾರೆ. ಈ ಸಂಬಂಧ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಪಕ್ಷದ ನಾಯಕ ಎಂ.ಎಲ್.ಶ್ರೀನಿವಾಸಗೌಡ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಗೆ ಇತ್ತೀಚೆಗೆ ಸಂಕಷ್ಟ ಎದುರಾಗಿತ್ತು. ಮುನಿಯಪ್ಪ ಅವರು ತಮ್ಮ ಬದ್ಧ ವೈರಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ದೇವೇಗೌಡರು ಮತ್ತು ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ, ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರ ಬೆಂಬಲಿಗರು ಸ್ಪಷ್ಟಪಡಿಸಿದ್ದಾರೆ.