News Kannada
Sunday, October 02 2022

ಬೆಂಗಳೂರು ನಗರ

ಬೆಂಗಳೂರು: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್! - 1 min read

Photo Credit : Twitter

ಬೆಂಗಳೂರು: ರಾಜ್ಯಸಭೆಗೆ ಆಯ್ಕೆಯಾಗಿರುವ ಸ್ಯಾಂಡಲ್​ವುಡ್ ನಟ ಜಗ್ಗೇಶ್​ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಚ್ಚ ಕನ್ನಡದಲ್ಲೇ ಜಗ್ಗೇಶ್​ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಗುರು ರಾಘವೇಂದ್ರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಅವರು, ಅದರ ವಿಡಿಯೋ ತುಣಕವೊಂದನ್ನ ತಮ್ಮ ಟ್ವೀಟರ್​ ಅಕೌಂಟ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವೇಳೆ, ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸ್ವೀಕಾರ ಮಾಡಿದ್ದೇನೆ. ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ.. ಹೃದಯಪೂರ್ವಕ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್‌ ಕುಮಾರ್‌ ಅವರಿಗೆ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.

See also  ಎಸ್.ಡಿ.ಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಲ್ಲಿ ಎನ್.ಇ.ಪಿ ಕಾರ್ಯಾಗಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು