News Kannada
Monday, October 03 2022

ಬೆಂಗಳೂರು ನಗರ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧಿಸಿದ ಆದೇಶವನ್ನು ಹಿಂಪಡೆದ ರಾಜ್ಯ ಸರ್ಕಾರ - 1 min read

Photo Credit : News Kannada

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಫೋಟೋ, ವಿಡಿಯೋ ತೆಗೆಯುವಂತಿಲ್ಲ ಎಂದು ಸರ್ಕಾರ ನಿನ್ನೆ ಆದೇಶಿಸಿತ್ತು. ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿಷೇಧಿಸಿದ 24ಗಂಟೆಯೊಳಗೆ ಆದೇಶವನ್ನು ಹಿಂಪಡೆದಿದೆ.  ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಿಷೇಧ ಆದೇಶವನ್ನು ಹೊರಡಿಸಿತ್ತು.

ನೌಕರರ ಸಂಘ ತಮ್ಮ ಮನವಿಯಲ್ಲಿ, ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಲ್ಲಿ ಕೆಲವರು ಕಚೇರಿಯ ಫೋಟೋ/ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಆದೇಶಿಸಿತ್ತು.

See also  ಪಿಎಸ್‍ಐ ನೇಮಕಾತಿಯಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ; ಆರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು