News Kannada
Wednesday, October 05 2022

ಬೆಂಗಳೂರು ನಗರ

ಬೆಂಗಳೂರು: ಮೈಸೂರು ದಸರಾ ಅದ್ಧೂರಿ ಆಚರಣೆಗೆ ತೀರ್ಮಾನ - 1 min read

Bengaluru: Mysuru Dasara to be celebrated in a grand manner
Photo Credit : By Author

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಸರಳವಾಗಿ ನಡೆದಿದ್ದ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಸಕಲ ಸಂಪ್ರದಾಯದೊಂದಿಗೆ ಅದ್ಧೂರಿಯಾಗಿ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ದಸರಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ದಸರಾ ಆಚರಣೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದು, ದಸರಾ  ಕುರಿತಂತೆ ಹೆಚ್ಚಿನ ಪ್ರಚಾರ ನಡೆಸುವ ಮೂಲಕ ದೇಶ ವಿದೇಶದ ಪ್ರವಾಸಿಗರನ್ನು ಸೆಳೆಯಲಾಗುವುದು ಎಂದರು.

ಆ.7ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಿಕವಾಗಿ ಗಜಪಡೆ ಸ್ವಾಗತಿಸಲಾಗುತ್ತದೆ.  ಸೆ.26ರಂದು ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅ.5ರಂದು ವಿಜಯದಶಮಿ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಈ ಬಾರಿಯ ದಸರಾ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತೇವೆ. ದಸರಾ ವಿಶ್ವಮಟ್ಟದಲ್ಲಿ ಬ್ರ್ಯಾಂಡ್ ಆಗಬೇಕು. ಮುಂಬೈ ಸೇರಿದಂತೆ ಮೆಟ್ರೋಪಾಲಿಟನ್ ನಗರಗಳಲ್ಲಿ ಪ್ರಚಾರ ಮಾಡುತ್ತೇವೆ ಎಂದು ಅವರು ಹೇಳಿದರು.

ದಸರಾ ಮಹೋತ್ಸವಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 10 ಕೋಟಿ ರೂ. ನೀಡಲಿದೆ. ಸಿಎಸ್‌ಆರ್ ಅನುದಾನ  ಬಳಸಿಕೊಂಡು ದಸರಾ ಆಚರಿಸುತ್ತೇವೆ. ದಸರಾ ವೇಳೆ ಪ್ರವಾಸಿಗರು, ಮೈಸೂರು ಜನತೆಯನ್ನು ಆಕರ್ಷಿಸುವ ದಸರಾ ವಸ್ತುಪ್ರದರ್ಶನವನ್ನು ನವರಾತ್ರಿ ಆರಂಭಕ್ಕೂ ಮುನ್ನ 15 ದಿನಗಳು ಮುಂಚಿತವಾಗಿ ಆರಂಭಿಸಲು ಚರ್ಚಿಸಲಾಗಿದೆ. ಈ ಬಾರಿಯ ವಸ್ತು ಪ್ರದರ್ಶನ ಜನಾಕರ್ಷಿಸಲಿದೆ.

ಮೈಸೂರು ದಸರಾದಂತೆಯೇ ಚಾಮರಾಜನಗರ ಮತ್ತು ಶ್ರೀರಂಗಪಟ್ಟಣ ದಸರಾವನ್ನು ವೈಭವದಿಂದ ಆಚರಿಸಲು  ನಿರ್ಧರಿಸಲಾಗಿದೆ. ಈ ಬಗ್ಗೆ ಮಂಡ್ಯ ಮತ್ತು ಚಾಮರಾಜನಗರ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳಲಿದೆ ಎಂದು ತಿಳಿಸಿದರು. ಜಂಬೂಸವಾರಿ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಶಿಲ್ಪ, ಚಿತ್ರಕಲೆ ಹಾಗೂ ಕರಕುಶಲ ಸ್ಥಳೀಯ ಕಲಾವಿದರಿಗೂ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಜಿ.ಟಿ.ದೇವೇಗೌಡ, ಪ್ರತಾಪ್ ಸಿಂಹ, ಶಾಸಕರಾದ  ರವೀಂದ್ರ ಶ್ರೀಕಂಠಯ್ಯ, ತನ್ವೀರ್ ಸೇಠ್, ಸಾರಾ ಮಹೇಶ್, ಹರ್ಷವರ್ಧನ್, ರಾಮದಾಸ್, ಪರಿಷತ್ ಸದಸ್ಯ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ಸೇರಿದಂತೆ ಹಲವರು ಇದ್ದರು.

See also  ಬೆಂಗಳೂರು: ಮಾಜಿ ಸಿಎಂ ಸಿದ್ದು ಬೆಂಗಳೂರು ನಗರದ ಯಾವುದೇ ಕ್ಷೇತ್ರಕ್ಕೆ ಬದಲಾಗುವ ಸಾಧ್ಯತೆ! 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು