News Kannada
Wednesday, August 10 2022

ಬೆಂಗಳೂರು ನಗರ

ಬೆಂಗಳೂರು: ನನಗೆ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ ಎಂದ ರೇಣುಕಾಚಾರ್ಯ - 1 min read

For me, protection of Hindu activists is more important: Renukacharya

ಬೆಂಗಳೂರು: ನನಗೆ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಚರ್ಚಿಸಿ ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ ಎಂದು ಸಿಎಂ‌ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಯ ಕುರಿತು ಆಕ್ರೋಶ ಹೊರ ಹಾಕಿದ ಮಾಜಿ ಸಚಿವ, ಹೊನ್ನಾಳಿ ಶಾಸಕ ರೇಣುಕಾಚಾರ್ಯ, “ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ” ಎಂದಿದ್ದಾರೆ.

ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು ಎಂದಿದ್ದಾರೆ.

 

See also  ಕೊರೋನ ಧನಗಾಹಿಗಳಿಗೆ ಶಪಿಸಿದ ನಟ ಜಗ್ಗೇಶ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು