News Kannada
Wednesday, August 10 2022

ಬೆಂಗಳೂರು ನಗರ

ಬೆಂಗಳೂರು: ಫಾಝೀಲ್ ಹತ್ಯೆ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ - 1 min read

Hubballi: The Congress has never stopped the ban on PFI and SDPI organisations.

ಬೆಂಗಳೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಕೊಲೆಯಾಗಿದೆ. ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಟೀಕಿಸಿದ್ದಾರೆ.

ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಬಿಜೆಪಿ ಸರ್ಕಾರ ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಟೀಕಿಸಿದ್ದಾರೆ.

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ದೂರಿದ್ದಾರೆ.

ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

See also  ಇಂದು ದೋಸ್ತಿ ಸರ್ಕಾರ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು