ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಕುರಿತು ಅಮಿತ್ ಶಾ ಅವರು ಮಾಹಿತಿ ಪಡೆದಿದ್ದಾರೆ. ಎಲ್ಲವನ್ನೂ ಹೇಳಲು ಆಗಲ್ಲ. ಸರ್ಕಾರದ ಕಾರ್ಯವೈಖರಿ ಬಗ್ಗೆ ಅಮಿತ್ ಶಾಗೆ ತೃಪ್ತಿಯಿದೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಮಾತನಾಡಿದ ಅರಗಜ್ಞಾನೇಂದ್ರ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಲಾವಣೆ ಊಹಾಪೋಹ ಅಷ್ಟೇ, ರಾಜ್ಯದ ಬೆಳವಣಿಗೆ ಅಮಿತ್ ಶಾ ಗಮನಕ್ಕೆ ಬಂದಿದೆ. ರಾಹುಲ್ ಗಾಂಧಿ ಆರೋಪದ ಬಗ್ಗೆ ಅವರಿಗೆ ಗೊತ್ತಿದೆ ಎಂದು ಹೇಳಿದ್ದಾರೆ.