ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ “ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ನಾನು ಆರೋಗ್ಯವಾಗಿ ಇದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಕೊರೊನಾ ಹಿನ್ನೆಲೆ ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.
75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಇಂದು ದೆಹಲಿಯಲ್ಲಿ ನಡೆಯಲಿದ್ದ ಸಭೆಯಲ್ಲಿ ಸಿಎಂ ಭಾಗವಹಿಸಬೇಕಿತ್ತು. ಕೊರೊನಾ ಹಿನ್ನೆಲೆ ಸಿಎಂ ತಮ್ಮ ದೆಹಲಿ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.
— Basavaraj S Bommai (@BSBommai) August 6, 2022