ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ 17 ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರು 17 ಜಿಲ್ಲೆಗಳ ಜಿಲ್ಲಾಡಳಿದ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಕೊರೋನಾ ಸೋಂಕಿನಿಂದಾಗಿ ಆರ್ ಟಿ ನಗರದ ನಿವಾಸದಲ್ಲಿ ಐಸೊಲೇಷನ್ ಗೆ ಒಳಗಾಗಿರುವ ಬೊಮ್ಮಾಯಿ ಅವರು ತಮ್ಮ ನಿವಾಸದಿಂದಲೇ ಸಭೆ ನಡೆಸಿದರು.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ದಾವಣಗೆರೆ, ತುಮಕೂರು, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ಬೀದರ್, ಕಲ್ಬುರ್ಗಿ, ಗದಗ, ಚಿಕ್ಕಮಗಳೂರು ಜಿಲ್ಲಾಡಳಿತ ಜೊತೆ ಸಭೆ ನಡೆಸಿ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.