ಬೆಂಗಳೂರು: ಕರ್ನಾಟಕದಲ್ಲಿ ಪಕ್ಷದ ಹಂಗಾಮಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಅಭಿಯಾನದ ಯಶಸ್ಸಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) 19 ಸಂಯೋಜಕರನ್ನು ನೇಮಿಸಿದೆ.
ಹಿರಿಯ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಯಾತ್ರೆ ರಾಜ್ಯವನ್ನು ಪ್ರವೇಶಿಸಲಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ವಿ.ಎಸ್.ಉಗ್ರಪ್ಪ, ತನ್ವೀರ್ ಸೇಠ್, ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಬೋಸರಾಜು, ಟಿ.ಬಿ.ಜಯಚಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಂಯೋಜಕರಾಗಿ ನಾಮನಿರ್ದೇಶನಗೊಂಡಿದ್ದಾರೆ.
ಈ ಪಾದಯಾತ್ರೆಯು 2023ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಪಕ್ಷದ ಸ್ಥಾನವನ್ನು ಬಲಪಡಿಸುತ್ತದೆ ಎಂದು ಕೆಪಿಸಿಸಿ ನಿರೀಕ್ಷಿಸುತ್ತಿದೆ.