ಬೆಂಗಳೂರು: ಚಿರತೆ ನುಸುಳುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ 52 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಆರಂಭದಲ್ಲಿ 22 ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಈಗ ಅದನ್ನು 52 ಶಾಲೆಗಳಿಗೆ ವಿಸ್ತರಿಸಲಾಗಿದೆ. ಬಹುತೇಕ ಶಾಲೆಗಳು ಗ್ರಾಮೀಣ ಪ್ರದೇಶಗಳಿಗೆ ಸಮೀಪದಲ್ಲಿವೆ.
ಅಧಿಕಾರಿಗಳ ಪ್ರಕಾರ ನಗರದ ಬಫರ್ ವಲಯದಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿವೆ. ಅರಣ್ಯ ಇಲಾಖೆ ಈ ಚಿರತೆಗಳ ಪತ್ತೆ ಕಾರ್ಯವನ್ನು ತೀವ್ರಗೊಳಿಸಿದೆ.