News Kannada
Thursday, October 05 2023
ಬೆಂಗಳೂರು ನಗರ

ಬೆಂಗಳೂರು: ಕಾನೂನಿನ ಜ್ಞಾನ ಮತ್ತು ಅರಿವು ಬಹು ಮುಖ್ಯ- ಸಿಎಂ ಬೊಮ್ಮಾಯಿ

Haveri: 'Sahitya Sammelana to discuss State's present day challenges'
Photo Credit : By Author

ಬೆಂಗಳೂರು: ಜನಸಾಮಾನ್ಯರಲ್ಲಿ ಕಾನೂನಿನ ಜ್ಞಾನ ಮತ್ತು ಅರಿವು ಬಹಳ ಮುಖ್ಯವಾದದ್ದು, ನಾವು ಇದುವರೆಗೂ ಕೇಂದ್ರದಿಂದ ಹಾಗೂ ರಾಜ್ಯದಿಂದ ರೂಪಿಸಲಾಗಿರುವ ಕಾನೂನಿನ ಪುಸ್ತಕಗಳು ಆಂಗ್ಲ ಭಾಷೆಯಲ್ಲಿದ್ದು, ಅದನ್ನು ಪಾಲಿಸಿಕೊಂಡು ಬಂದಿದ್ದೇವೆ. ಇಂದು ಈ ಪುಸ್ತಕಗಳನ್ನು ಕನ್ನಡ ಭಾಷೆಗೆ ತರ್ಜುಮೆ ಮಾಡಲಾಗಿದ್ದು, ಕಾನೂನು ಮತ್ತು ಅಧಿನಿಯಮಗಳು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತಹ ಕೆಲಸವನ್ನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ರಾಜಭಾಷಾ (ವಿಧಾಯೀ) ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯವು ಮಾಡಿರುವುದು ತುಂಬಾ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ರಾಜಭಾಷಾ (ವಿಧಾಯೀ) ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದ ವತಿಯಿಂದ ಹೊರತರಲಾದ ಭಾರತ ದಂಡ ಸಂಹಿತೆ (IPC), ದಂಡ ಪ್ರಕ್ರಿಯಾ ಸಂಹಿತೆ (CCP), ಮತ್ತು ಭಾರತ ಸಾಕ್ಷ್ಯ ಅಧಿನಿಯಮ (IEA) ಗಳ ದ್ವಿಭಾಷಾ (Diglot) ಕನ್ನಡ ಅವೃತ್ತಿಗಳ ಲೋಕಾರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ಆಂಗ್ಲ ಭಾಷೆಯಲ್ಲಿರುವ ಈ ಪುಸ್ತಕಗಳನ್ನು ಭಾಷಾಂತರ ಮಾಡಲು ಸಂಸದೀಯ ಇಲಾಖೆ ಸುದೀರ್ಘವಾಗಿ ಶ್ರಮವಹಿಸಿದೆ. ಇದರ ಫಲವಾಗಿ ಇಂದು ಭಾರತ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ, ಮತ್ತು ಭಾರತ ಸಾಕ್ಷ್ಯ ಅಧಿನಿಯಮ ಪುಸ್ತಕಗಳು ಕನ್ನಡ ಭಾಷೆಗೆ ಭಾಷಾಂತರಗೊಂಡಿದ್ದು, ಜನಸಾಮಾನ್ಯರು ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿರುವವರು ಬಹಳ ಸುಲಭವಾಗಿ ಓದಿ ಅರ್ಥಮಾಡಿಕೊಳ್ಳುವಂತಹ ಪುಸ್ತಕಗಳಾಗಿವೆ. ಈ ಪುಸ್ತಕಗಳನ್ನು ಎಲ್ಲಾ ತಾಲ್ಲೂಕು ಕಚೇರಿಗಳು, ಪೊಲೀಸ್ ಠಾಣೆಗಳಿಗೆ ಒದಗಿಸುವ ಕೆಲಸ ಕೂಡಲೇ ಆಗಬೇಕು. ಅಲ್ಲದೇ ಇಲಾಖಾ ವೆಬ್‍ಸೈಟ್‍ನಲ್ಲಿ ಸಹ ಪ್ರಕಟಿಸಲು ಕ್ರಮವಹಿಸಬೇಕು. ಸಾರ್ವಜನಿಕರಿಗೂ ಸಹ ಕಡಿಮೆ ಬೆಲೆಯಲ್ಲಿ ಈ ಪುಸ್ತಕಗಳು ದೊರಕುವಂತಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಡಾ.ಕೆ.ಸಿ.ನಾರಾಯಣಗೌಡ, ಶಾಸನ ರಚನೆ ಹಾಗೂ ಸಂಸದೀಯ ವ್ಯವಹಾರಗಳ ಸರ್ಕಾರದ ಕಾರ್ಯದರ್ಶಿಗಳಾದ ಜಿ.ಶ್ರೀಧರ್, ಭಾಷಾಂತರ ನಿರ್ದೇಶನಾಲಯದ ನಿರ್ದೇಶಕರಾದ ಎಂ.ವೆಂಕಟೇಶ ಉಪಸ್ಥಿತರಿದ್ದರು.

See also  ವಿಧಾನ ಪರಿಷತ್ ಕಾರ್ಯದರ್ಶಿಗೆ ‌ಶೋಕಾಸ್ ನೋಟಿಸ್ ನೀಡಿದ ಸಭಾಪತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು