ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2032 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,28,117ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40139ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 1202 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1850049ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಇಂದಿನ 12/08/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BdTzfSm8Or @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/1AwYhmN2Sd
— K’taka Health Dept (@DHFWKA) August 12, 2022