ಬೆಂಗಳೂರು: ರಾಜಧಾನಿಯಲ್ಲಿ ಕ್ಯಾನ್ಸರ್‌ನಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೋಣನಕುಂಟೆಯ ಚುಂಚನಕಟ್ಟೆ ಎಸ್ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆಗೆ ಶರಣಾದವರು.
ತಾನು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ನನಗೆ ಹೆಚ್ಚು ಕಮ್ಮಿ ಆದ್ರೆ ಮುಂದೆ ಯಾರು ನೋಡಿಕೊಳ್ಳುತ್ತಾರೆ ಅಂತ ಅಲೋಚಿಸಿದ ಮಹೇಶ್, ಇಂದು ಬೆಳಗ್ಗೆ ತಮ್ಮ ಹೆಂಡ್ತಿ ಹಾಗೂ ಮಗನನ್ನು ಕೊಲೆ ಮಾಡಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಕೋಣಕುಂಟೆ ಪೋಲಿಸರು ಆಗಮಿಸಿದ್ದು ಮರಣೋತ್ತರ ಪರೀಕ್ಷೆಗೆ ಮೂವರ ಶವವನ್ನು ಕಳುಹಿಸಿದ್ದು, ಬಳಿಕ ಕೊಲೆಯಾಗಿರುವ ಮಾಹಿತಿ ಕೂಡ ತಿಳಿದು ಬರಲಿದೆ ಎನ್ನಲಾಗಿದೆ.