ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಇಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಿದ್ದರಾಮಯ್ಯನವರ ಜತೆ ನೇರವಾಗಿ ಮಾತನಾಡಿ ಬೆದರಿಕೆ ಕರೆಗಳ ವಿವರ ನೀಡುವಂತೆ ಅವರಿಗೆ ಅಥವಾ ಅವರ ಸಿಬ್ಬಂದಿಗೆ ಸೂಚಿಸಿದ್ದೇನೆ ಎಂದರು.
ನಾನು ಕೂಡ ಡಿಜಿ ಅವರನ್ನು ಕರೆದು ಮಾತನಾಡಿದ್ದೆ, ಈ ವಿಚಾರದಲ್ಲಿ ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಆದರೆ ಇದು ಎರಡೂ ಕಡೆಯಿಂದ ನಡೆಯುತ್ತಿದೆ, ಯಾರೂ ಇತರರ ಮನಸ್ಸನ್ನು ಕೆರಳಿಸುವ ಹೇಳಿಕೆಗಳನ್ನು ನೀಡಬಾರದು, ವಿರೋಧ ಪಕ್ಷದ ನಾಯಕನಿಗೆ ಸೂಕ್ತ ಭದ್ರತೆ ನೀಡುವಂತೆ ಸೂಚನೆ ನೀಡಿದ್ದೇನೆ.