ಬೆಂಗಳೂರು,ಆ.20: ಮನೆಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ರಾಜ್ಯದ ರಾಮ್‍ಕುಮಾರ್(20) ಮತ್ತು ಮಧಸೂದನ್ ಪ್ರಸಾದ್ ವರ್ಮ(45) ಬಂಧಿತರು. ಕಾಡುಗೋಡಿ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸಿ 230 ಗ್ರಾಂ ತೂಕದ ಚಿನ್ನದ ಒಡವೆಗಳು, 200 ಗ್ರಾಂ ಬೆಳ್ಳಿ ಸಾಮಾನುಗಳು, ಯಮಹಾ ಬೈಕ್, 4 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ವೈಟ್‍ಫೀಲ್ಡ್ ವಿಭಾಗದ ಉಪಪೊಲೀಸ್ ಆಯುಕ್ತ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಶಾಂತಮಲ್ಲಪ ಸಲಹೆಯಂತೆ, ಇನ್‍ಸ್ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ಸಿಬ್ಬಂದಿ ತಂಡ ಬಿಹಾರ ರಾಜ್ಯಕ್ಕೆ ತೆರಳಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
Photo credit: G Mohan