News Kannada
Saturday, September 23 2023
ಬೆಂಗಳೂರು ನಗರ

ಬೆಂಗಳೂರು: ಕ್ಷೇಮವನ ಜೀವನದ ಸೂತ್ರವಾಗಲಿ- ಸಿಎಂ ಬೊಮ್ಮಾಯಿ

Bengaluru: Let kshema be the formula of life: CM Bommai
Photo Credit : G Mohan

ಬೆಂಗಳೂರು, ಸೆ.1: ವನ ಎಂದರೆ ಹಸಿರು, ಸಮೃದ್ಧಿ ಹಾಗೂ ಆಮ್ಲಜನಕ. ಆಮ್ಲಜನಕ ಜೀವನದ ಸೂತ್ರ. ಅಂದರೆ ಆಮ್ಲಜನಕ. ಜೀವನದ ಸೂತ್ರ ಆಮ್ಲಜನಕ. ಈ ಕ್ಷೇಮವನ ಜೀವನದ ಸೂತ್ರವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರದ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಚಿಕಿತ್ಸೆಯಲ್ಲಿ ಧರ್ಮವನ್ನು ಸೇರಿಸುವ ಕ್ಷೇತ್ರ ಕ್ಷೇಮವನ
ಕ್ಷೇಮವನ ಎಂಬ ಹೆಸರಿನಲ್ಲಿಯೇ ನೆಮ್ಮದಿ ಇದೆ. ಮೊದಲು ಪತ್ರ ಬರೆಯುವಾಗ ಕ್ಷೇಮ ಎಂದು ಬರೆದೇ ಪ್ರಾರಂಭ ಮಾಡುತ್ತಿದ್ದೆವು. ಆರೋಗ್ಯ ಎಂಬುದು ಅತ್ಯಂತ ಪ್ರಮುಖ ಸಂಗತಿ ಎನ್ನುವುದನ್ನು ನಮ್ಮ ಪೂರ್ವಜರು ಅರಿತಿದ್ದರು. ನಾವು ಈಗ ಇದನ್ನು ತಿರುವು ಮುರುವು ಮಾಡಿದ್ದೇವೆ. ಬೇಡವಾದುದ್ದನ್ನು ದೇಹಕ್ಕೆ ಸೇರಿಸಿಕೊಂಡು ಕಷ್ಟಪಡುತ್ತಿದ್ದೇವೆ. ದೇಹದೊಳಗಿನ ವಿಷಕಾರಿ ಅಂಶಗಳನ್ನು ಹೊರತೆಗೆದು ದೇಹ ಮತ್ತು ಮನಸ್ಸುಗಳಿಗೆ ಆರೋಗ್ಯ ನೀಡುವ ಕೆಲಸವನ್ನು ಕ್ಷೇಮವನ ಮಾಡಲಿದೆ. ಕ್ಷೇಮವನ ಎನ್ನುವುದು ಅದ್ಭುತ ಕಲ್ಪನೆ. ಬಾಹ್ಯದಿಂದ ಚಿಕಿತ್ಸೆ, ಔಷಧ ನೀಡದೇ ಸಹಜ ರೀತಿಯಲ್ಲಿ ಚಿಕಿತ್ಸೆ ನೀಡಿ ವಾಸಿ ಮಾಡುವ ಕ್ಷೇತ್ರವಿದು. ಚಿಕಿತ್ಸೆಯಲ್ಲಿ ಧರ್ಮವನ್ನು ಸೇರಿಸುವ ಕ್ಷೇತ್ರ ಕ್ಷೇಮವನ ಎಂದರು. ಆರೋಗ್ಯ ಎನ್ನುವುದು ಮನಸ್ಥಿತಿಯಿಂದ ಪ್ರಾರಂಭವಾಗುತ್ತದೆ. ಮನಸ್ಸು ಮತ್ತು ದೇಹದ ಉತ್ತಮ ಸ್ಥಿತಿಯೇ ಆರೋಗ್ಯ. ಸಂಯಮದ ಮನಸ್ಥಿತಿ ಅಗತ್ಯ. ಮನಸ್ಸು ಹತೋಟಿಯಲ್ಲಿದ್ದರೆ ಸ್ಥಿತಪ್ರಜ್ಞತೆಗೆ ದಾರಿಮಾಡಿಕೊಡುತ್ತದೆ. ವಾಸ್ತವವಲ್ಲದ್ದನ್ನು ದೇಹ ಮತ್ತು ಮನಸ್ಸಿನೊಳಗೆ ಬಿಟ್ಟುಕೊಳ್ಳದಿರುವುದೇ ಸ್ಥಿತಪ್ರಜ್ಞತೆ. ಸ್ಥಿತಪ್ರಜ್ಞತೆಯ ಸ್ಥಿತಿಗೆ ಕ್ಷೇಮವನ ಕೊಂಡೊಯ್ಯುತ್ತದೆ ಎಂದು ತಿಳಿಸಿದರಲ್ಲದೇ ಮಾನವನ ಪ್ರತಿ ಅಂಗಾಂಗ ಕ್ಷೇಮವಾಗಿರಬೇಕು. ದಿನಚರಿ ಅಶಿಸ್ತಿ ನಿಂದ ಕೂಡಿದ್ದರೆ ದೇಹ ಮತ್ತು ಮನಸ್ಸು ಶಿಥಿಲಗೊಳ್ಳತ್ತದೆ. ಕ್ಷೇಮವನ ದೇಹ ಮತ್ತು ಮನಸ್ಸುಗಳನ್ನು ಸಮತೋಲನ ಕಾಯುತ್ತದೆ ಎಂದರು.

ತತ್ವಜ್ಞಾನ ಮತ್ತು ಆಡಳಿತ ಒಂದೇ ನಾಣ್ಯದ ಎರಡು ಮುಖಗಳು
ಉತ್ತರ ಪ್ರದೇಶ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರು ರಾಜ್ಯಕ್ಕೆ ಆಗಮಿಸಿರುವುದು ನಮಗೆ ಸಂಭ್ರಮ ಮತ್ತು ಹೆಮ್ಮೆ. ಉತ್ತರದಿಂದ ದಕ್ಷಿಣದವರೆಗೂ ಅವರು ಮನೆ ಮಾತಾಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗುರುಗಳಾಗಿದ್ದವರು. ನಮ್ಮ ಧರ್ಮ ಮತ್ತು ಸಮಾಜದಲ್ಲಿ ಗುರುಗಳಿಗೆ ಅ ಅತ್ಯುತ್ತಮ ಸ್ಥಾನವಿದೆ. ಮೂರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ. ಆದರ್ಶಪ್ರಾಯ, ಮಾದರಿಯಾಗಿ, ಸಾರ್ವಜನಿಕ ಜೀವನವನ್ನು ಅತಿ ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ನುಡಿದಂತೆ ನಡೆಯುತ್ತಾರೆ. ಗುರುಗಳು ಕೂಡ ದಕ್ಷ ಆಡಳಿತಗಾರರಾಗಬಹುದೆಂದು ಅವರು ನಿರೂಪಿಸಿದ್ದಾರೆ. ತತ್ವಜ್ಞಾನ ಮತ್ತು ಆಡಳಿತ ಒಂದೇ ನಾಣ್ಯದ ಎರಡು ಮುಖಗಳೆಂದು ತೋರಿಸಿಕೊಟ್ಟಿದ್ದರೆ ಹಾಗೂ ಆಧ್ಯಾತ್ಮ ಮತ್ತು ಆಡಳಿತವೂ ಒಂದೇ ನಾಣ್ಯದ ಎರಡು ಮುಖಗಳೆಂದು ನಿರೂಪಸಿದ್ದಾರೆ. ದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆ ಅವರ ಆಡಳಿತದ ಪ್ರಮುಖ ಅಂಶ. ಹಲವಾರು ಸಮುದಾಯಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಅವರು ಮಾಡಿದ್ದಾರೆ. ಪ್ರಜಾಸತ್ತಾತ್ಮಕ, ಬಹು ಸಂಸ್ಕøತಿಯ ಭಾರತದಲ್ಲಿ ಹೊಸ ಅಧ್ಯಾಯವನ್ನು ಅವರು ಬರೆದಿದ್ದಾರೆ ಎಂದರು.

See also  ದೆಹಲಿ: ದ್ರೌಪದಿ ಮುರ್ಮು ಅವರನ್ನು ಅಭಿನಂದಿಸಿದ ನಳಿನ್ ಕುಮಾರ್ ಕಟೀಲ್

ನಮ್ಮ ಸಮಾಜದಲ್ಲಿ ಗುರುಗಳಿಗೆ ಅತ್ಯುನ್ನತ ಸ್ಥಾನವಿದೆ. ಸಾರ್ವಜನಿಕ ಬದುಕಿನಲ್ಲಿ 3 ದಶಕಗಳಿಂದಲೂ ಹೆಚ್ಚಿದ್ದು, ನುಡಿದಂತೆ ನಡೆಯುತ್ತಾರೆ. ಗುರುಗಳು ದಕ್ಷ ಆಡಳಿತಗಾರರಾಗಿರಬಹುದು. ತತ್ವಜ್ಞಾನ, ಆಡಳಿತಕ್ಕೆ ಸಂಬಂಧವಿಲ್ಲ. ವಿಜ್ಞಾನ ಮತ್ತು ತತ್ವಜ್ಞಾನ ನಾಣ್ಯದ ಎರಡು ಮುಖಗಳು. ಆಧ್ಯಾತ್ಮಿಕತೆ ಹಾಗೂ ಆಡಳಿತವನ್ನು ನಾಣ್ಯದ ಎರಡು ಮುಖಗಳು ತೋರಿಸಿದ್ದಾರೆ. ದುಷ್ಟರಿಗೆ ರಕ್ಷಣೆ ಇಲ್ಲ, ಶಿಷ್ಟರಿಗೆ ರಕ್ಷಣೆ ಆಗುತ್ತಿದೆ. ಬಹಳಷ್ಟು ಕಾಲದಿಂದ ಎಲ್ಲ ಸಮುದಾಯಗಳಲ್ಲಿ ವಿಶ್ವಾಸ ಮೂಡುವ ಆಡಳಿತ ತಂದಿದ್ದಾರೆ. ಎಲ್ಲ ಸಮಾಜಗಳ ರಕ್ಷಣೆ ಆಗುತ್ತಿದೆ. ಸಮಾಜದಲ್ಲಿ ಸಾಮರಸ್ಯ ಮೂಡುತ್ತಿದೆ. ಹೊಸ ಅಧ್ಯಾಯವನ್ನು ಬರೆದಿದಾರೆ. ಕನ್ನಡ ನಾಡಿಗೆ ಬಂದಿರುವುದು ಬಹಳಷ್ಟು ಸಂತೋಷವಾಗಿದೆ ಎಂದರು.

ವೀರೆಂದ್ರ ಹೆಗ್ಗಡೆಯವರು, ಪರಿವರ್ತರಕರು. ಸಮಾಜದಲ್ಲಿರುವ ಕಂದಾಚಾರವನ್ನು ದೂರ ಮಾಡಿ, ಸಕಾರಾತ್ಮಕವಾಗಿ ಬದುಕಿಗೆ ಹೊಸ ಆಯಾಮ ನೀಡಿದ್ದಾರೆ. ಗ್ರಾಮೀಣಾಭಿವೃಧ್ಧಿ, ಎಲ್ಲರಿಗೂ ಶುದ್ಧ ಕುಡಿಯುವ ನೀರು ದೊರೆಯಬೇಕೆಂಬ ಪರಿಕಲ್ಪನೆ ಇಡೀ ಸಮಾಜದಲ್ಲಿ ಜಾಗೃತಿ ಮೂಡಿಸಿದೆ. ಧರ್ಮ , ಸಾಮಾಜಿಕ ಹೊಣೆಗಾರಿಕೆಯ್ನ ಕೈಗೆತ್ತಿಕೊಂಡಾಗ ಜನ ಪಾಲ್ಗೊಳ್ಳುತ್ತಾರೆ. ಜನರನ್ನು ಫಲಾನುಭವಿಗಳನ್ನಾಗಿಸದೇ, ಪಾಲುದಾರರನ್ನಾಗಿ ಮಾಡಿದ್ದಾರೆ. ಕೆರೆಕಟ್ಟೆ, ಸ್ಮಶಾನ ಕಟ್ಟಿದ್ದಾರೆ. ಸ್ತ್ರೀಶಕ್ತಿಸಂಘಗಳಿಗೆ ಆರ್ಥಿಕ ಸಹಾಯ, ಸ್ವಾಭಿಮಾನದ ಬದುಕು ಕೊಟ್ಟಿದ್ದಾರೆ. ಧಾರವಾಡ ಮೆಡಿಕಲ್ ಕಾಲೇಜು, ಉಜಿರೆಯಲ್ಲಿ ಆಯುರ್ವೇದ ಕಾಲೇಜುಗಳನ್ನು ಕಟ್ಟಿದ್ದಾರೆ. ಕ್ಷೇಮನವದ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ ಎಂದರು.

ನಿರ್ಮಲಾನಂದ ಗುರುಗಳು, ವಿದ್ಯೆಯಲ್ಲಿ, ಆಡಳಿತದಲ್ಲಿ, ಆಧ್ಯಾತ್ಮಿಕತೆಯಲ್ಲಿ ಸಾಧನೆ ಮಾಡಿದ್ದಾರೆ. ಬಡವರಿಗೆ ವಿದ್ಯೆ ಹಾಗೂ ಆಶ್ರಯ ನೀಡಿ ದಕ್ಷಿಣ ಕರ್ನಾಟಕ ಜೊತೆ ಉತ್ತರ ಕರ್ನಾಟಕದಲ್ಲಿಯೂ ತಮ್ಮ ಕಾರ್ಯಕ್ಷೇತ್ರವನ್ನು ವಿಸ್ತರಿಸಿದ್ದಾರೆ. ಕಾನೂನಾತ್ಮಕವಾಗಿ, ತಾತ್ವಿಕವಾಗಿ, ವೈಜ್ಞಾನಿಕವಾಗಿ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದಾರೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು