News Kannada
Friday, September 30 2022

ಬೆಂಗಳೂರು ನಗರ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಗೆ ಬ್ರಿಜೇಶ್‌ ಕಾಳಪ್ಪ ಸೇರ್ಪಡೆ - 1 min read

Bengaluru: Brijesh Kalappa joins Aam Aadmi Party
Photo Credit : News Kannada

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪರವರು ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್‌ ಪರಾಗ್‌ನಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್‌ ಪಾಂಡೆರವರು ಬ್ರಿಜೇಶ್‌ ಕಾಳಪ್ಪರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ನಂತರ ಬ್ರಿಜೇಶ್‌ ಕಾಳಪ್ಪರವರನ್ನು ಸ್ವಾಗತಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ದೇಶದಲ್ಲಿ ಉತ್ತಮ ಬದಲಾವಣೆ ತರಬೇಕೆಂಬ ಹಂಬಲವಿರುವ ನಾಯಕರಲ್ಲಿ ಬ್ರಿಜೇಶ್‌ ಕಾಳಪ್ಪ ಒಬ್ಬರು. ರಾಜಕೀಯ ಹಾಗೂ ಆಡಳಿತದಲ್ಲಿ ಆಮ್‌ ಆದ್ಮಿ ಪಾರ್ಟಿಯು ಬದಲಾವಣೆ ತಂದಿರುವುದನ್ನು ಮನಗಂಡು ಅವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಜನಪರ ಕಾಳಜಿಯಿರುವವರಿಗೆ ಹಾಗೂ ದೇಶದ ಭವಿಷ್ಯಕ್ಕಾಗಿ ದುಡಿಯುವ ಹಂಬಲ ಇರುವವರಿಗೆ ಎಎಪಿಯು ಉತ್ತಮ ವೇದಿಕೆಯಾಗಿದ್ದು, ಇದನ್ನು ಇನ್ನಷ್ಟು ನಾಯಕರು ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಹೇಳಿದರು.

“ಸಜ್ಜನ ನಾಯಕರನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಂತಹ ಪಕ್ಷಗಳು ಮೂಲೆಗುಂಪು ಮಾಡುತ್ತಿವೆ. ಅವುಗಳಿಗೆ ಕಮಿಷನ್‌ ರೂಪದಲ್ಲಿ ಜನರ ತೆರಿಗೆ ಹಣವನ್ನು ಕೊಳ್ಳೆಹೊಡೆಯುವ ನಾಯಕರು ಬೇಕೇ ವಿನಹ ಪ್ರಾಮಾಣಿಕರು ಬೇಡ. ಹಣಬಲ ಹಾಗೂ ತೋಳುಬಲವಿಲ್ಲದ ಒಳ್ಳೆಯ ಜನರನ್ನು ಅಧಿಕಾರದಿಂದ ದೂರವಿಡಲು ಆ ಪಕ್ಷಗಳ ನಾಯಕರು ಸದಾ ಯೋಜನೆ ರೂಪಿಸುತ್ತಿರುತ್ತಾರೆ. ಇದರಿಂದಾಗಿ ಅನೇಕ ಸಜ್ಜನ ರಾಜಕಾರಣಿಗಳು ಆಮ್‌ ಆದ್ಮಿ ಪಾರ್ಟಿಯತ್ತ ಮುಖ ಮಾಡುತ್ತಿದ್ದಾರೆ. ಎಎಪಿಯ ಸತ್ಯ-ನಿಷ್ಠೆಯ ರಾಜಕಾರಣ ಹಾಗೂ ಕೊಟ್ಟ ಮಾತಿಗೆ ತಪ್ಪದಿರುವ ಗುಣವು ಒಳ್ಳೆಯ ಮನಸ್ಸುಗಳನ್ನು ಆಕರ್ಷಿಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.

“ವಿದ್ಯಾರ್ಥಿಯಾಗಿದ್ದಾಗಲೇ ಸಾರ್ವಜನಿಕ ಜೀವನ ಪ್ರವೇಶಿಸಿದ ಬ್ರಿಜೇಶ್‌ ಕಾಳಪ್ಪರವರು ಕಾಂಗ್ರೆಸ್‌ ನಾಯಕರಾಗಿ, ಅದರ ರಾಷ್ಟ್ರೀಯ ವಕ್ತಾರರಾಗಿ, ಸುಪ್ರೀಂಕೋರ್ಟ್‌ ವಕೀಲರಾಗಿ, ಪತ್ರಕರ್ತರಾಗಿ, ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರರಾಗಿ, ಹರಿಯಾಣ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆಗಿ ಕಾರ್ಯನಿರ್ವಹಿಸಿದ ಸುದೀರ್ಘ ಅನುಭವ ಹೊಂದಿದ್ದಾರೆ. ಕಾವೇರಿ, ಕೃಷ್ಣ, ಮಹದಾಯಿ ನದಿಗಳ ನೀರು ಹಂಚಿಕೆ ವಿವಾದಗಳಿಗೆ ಸಂಬಂಧಿಸಿ ಕರ್ನಾಟಕದ ಪರ ನ್ಯಾಯಾಲಯಗಳಲ್ಲಿ ವಕಾಲತ್ತು ವಹಿಸಿದ್ದಾರೆ. ಯಾವುದೇ ವಿಚಾರವನ್ನು ತಕ್ಷಣ ಗ್ರಹಿಸಿ, ಸೂಕ್ಷ್ಮ ವಿವೇಚನೆಯೊಂದಿಗೆ ಸತ್ಯಾಂಶವನ್ನು ಹೊರತೆಗೆಯುವ ವಿಶೇಷ ಗುಣವನ್ನು ಬ್ರಿಜೇಶ್‌ ಕಾಳಪ್ಪ ಹೊಂದಿದ್ದಾರೆ” ಎಂದು ಪೃಥ್ವಿ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಸೇರಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, “ದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಸರ್ಕಾರವು ಹೊಸಹೊಸ ಜನಪರ ಯೋಜನೆಗಳನ್ನು ನಿರಂತರವಾಗಿ ಜಾರಿಗೆ ತರುತ್ತಿದೆ. ಗುಣಮಟ್ಟ ಆಡಳಿತ ಹೇಗಿರುತ್ತದೆ ಎಂಬುದನ್ನು ದೇಶಕ್ಕೆ ತೋರಿಸಿಕೊಡುತ್ತಿದೆ. ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದೇ ದುರಾಡಳಿತ ನೀಡುತ್ತಿರುವ ಬಿಜೆಪಿಗೆ ಸಡ್ಡು ಹೊಡೆಯುವ ಸಾಮರ್ಥ್ಯವು ಆಮ್‌ ಆದ್ಮಿ ಪಾರ್ಟಿಗಿದೆ. ಮುಂಬರುವ ವಿವಿಧ ಚುನಾವಣೆಗಳಲ್ಲಿ ಎಎಪಿ ಜಯಗಳಿಸಿ ಅಧಿಕಾರ ಹಿಡಿದರೆ ಮಾತ್ರ ದೇಶದ ಭವಿಷ್ಯ ಬಲಗೊಳ್ಳಲಿದೆ” ಎಂದು ಹೇಳಿದರು.

ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮಾಜಿ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಪಕ್ಷದ ಮಾಧ್ಯಮ ವಕ್ತಾರ ಕೆ. ಮಥಾಯಿ, ಪಕ್ಷದ ಮುಖಂಡರಾದ ಮೋಹನ್‌ ದಾಸರಿ, ಸಂಚಿತ್ ಸಹವಾನಿ, ಜಗದೀಶ್‌ ವಿ ಸದಂ, ಕುಶಲಸ್ವಾಮಿ,ಚನ್ನಪ್ಪಗೌಡ ನಲ್ಲೂರು , ಸುರೇಶ್ ರಾಥೋಡ್ ,ದರ್ಶನ್ ಜೈನ್ ಮತ್ತಿತರ ನಾಯಕರು, ಕಾರ್ಯಕರ್ತರು ಹಾಗೂ ಬ್ರಿಜೇಶ್‌ ಕಾಳಪ್ಪರವರ ಅನೇಕ ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

See also  ಮಂಗಳಮುಖಿಯರಂತೆ ನಟಿಸಿ ಹಣ ಸುಲಿಗೆ: ಆರೋಪಿಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು