ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೆ.16ರಂದು ಚುನಾವಣೆ ನಡೆಯಲಿದೆ. ಎಐಸಿಸಿ ಪ್ರಕಟಿಸಿರುವ ಘಟನೆಗಳ ಕ್ಯಾಲೆಂಡರ್ ಪ್ರಕಾರ ಒಟ್ಟು 476 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಮೂಲಗಳ ಪ್ರಕಾರ ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಪಕ್ಷದ ಸಂವಿಧಾನದ ಪ್ರಕಾರವೇ ಚುನಾವಣೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲು ಎಐಸಿಸಿ ಶಿವಕುಮಾರ್ ಬಲದ ಮೇಲೆ ಸವಾರಿ ಮಾಡುತ್ತಿದೆ. ಕೆಪಿಸಿಸಿ ಚುನಾವಣೆ ಬಳಿಕ ಎಐಸಿಸಿ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ.