News Kannada
Sunday, December 04 2022

ಬೆಂಗಳೂರು ನಗರ

ಬೆಂಗಳೂರು: ಚಿತ್ರಕಲಾ ಪರಿಷತ್ತಿನಲ್ಲಿ‌ ‘ದಸರಾ ಸಂಭ್ರಮ’

Bengaluru: 'Dasara celebrations' at Chitrakala Parishad
Photo Credit : News Kannada

ಬೆಂಗಳೂರು, ಸೆ.27: ಈ ಬಾರಿ ದಸರಾ ಹಬ್ಬಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್ ವಿಶೇಷವಾಗಿ ಸಜ್ಜಾಗಿದೆ. ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆರ್ಟಿಸಾನ್ಸ್ ಬಜಾರ್ (ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ) ಅನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 29ರಿಂದ ಅಕ್ಟೋಬರ್ 9ರವರೆಗೆ 11 ದಿನಗಳ ಕಾಲ ನಡೆಯಲಿರುವ ಈ ಮೇಳ ಶಾಪಿಂಗ್ ಪ್ರಿಯರ ಕಣ್ಮನಗಳಿಗೆ ಮುದ ನೀಡಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್ ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

See also  ಗೌರಿ, ಎಂ.ಎಂ. ಕಲಬುರ್ಗಿ ಹಂತಕರ ವಿರುದ್ಧ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು