ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ 90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಅನ್ನು ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಪರ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.