ಬೆಂಗಳೂರು: ಸಹೋದರನ ಪುತ್ರನ ಸಾವಿನ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ರೇಣುಕಾಚಾರ್ಯ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಂದ್ರಶೇಖರ್ನದ್ದು ಸಹಜ ಸಾವಲ್ಲ, ಅಪಘಾತವಲ್ಲ. ಇದೊಂದು ಪೂರ್ವನಿಯೋಜಿತ ಕೊಲೆ ಎಂಬುದುನ್ನು ಎಲ್ಲರೂ ಹೇಳುತ್ತಿದ್ದಾರೆ. ಪೊಲೀಸ್ ಇಲಾಖೆ ನಡೆಸುತ್ತಿರುವ ತನಿಖೆ ಬಗ್ಗೆ ಜನರಲ್ಲಿ ವಿಶ್ವಾಸ ಕಡಿಮೆ ಆಗಿದೆ.
ನೂರಾರು ಪೊಲೀಸರು, ತಂಡಗಳಿದ್ದರೂ ಚಂದ್ರು ನಾಪತ್ತೆ ಆಗಿದ್ದರೂ ಯಾಕೆ ಪತ್ತೆ ಹಚ್ಚಲಿಲ್ಲ?. ಪಕ್ಷದ ಮುಖಂಡರು, ಕಾರ್ಯಕರ್ತರು ಶಿವಮೊಗ್ಗದಿಂದ ಡ್ರೋನ್ ತರಿಸಿ ಕಾರು ಮತ್ತು ಚಂದ್ರುನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗಿದ್ದಾರೆ. ಆದರೆ ತನಿಖೆ ಸಂಪೂರ್ಣ ವಿಫಲವಾಗಿದೆ ಎಂದು ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.