News Kannada
Thursday, December 08 2022

ಬೆಂಗಳೂರು ನಗರ

ಬೆಂಗಳೂರು: ನವೆಂಬರ್ 20 ರಂದು ಬಳ್ಳಾರಿಯಲ್ಲಿ ಎಸ್.ಟಿ ಮೋರ್ಚಾ ಸಮಾವೇಶ

Photo Credit : Twitter

ಬೆಂಗಳೂರು: ನವೆಂಬರ್ 20 ರಂದು ಬಳ್ಳಾರಿಯಲ್ಲಿ ಎಸ್.ಟಿ ಮೋರ್ಚಾ ಸಮಾವೇಶ ಹಾಗೂ ನ. 30 ರಂದು ಮೈಸೂರಿನಲ್ಲಿ ಎಸ್.ಸಿ ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಜನಸಂಕಲ್ಪ ಯಾತ್ರೆ ಪುನಃ ಪ್ರಾರಂಭವಾಗಲಿದೆ.
ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳು ಸತತವಾಗಿ ಕಾರ್ಯಕ್ರಮಗಳಿವೆ. ಡಿಸೆಂಬರ್ ವರೆಗೆ ಜನಸಂಕಲ್ಪ ಯಾತ್ರೆ ಮುಂದುವರೆಯಲಿದೆ. ಅಭೂತಪೂರ್ವ ಬೆಂಬಲ ಎಲ್ಲೆಡೆ ದೊರೆಯುತ್ತಿದೆ. ಈ ಬಾರಿ ಮುಂಬೈ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದು, ಇದು ನಮ್ಮ ಮುಂದಿನ ವಿಜಯಕ್ಕೆ ಪುಷ್ಟಿ ನೀಡುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ನ. 11 ರಂದು ರಾಜ್ಯಕ್ಕೆ ಆಗಮಿಸಿದ್ದು ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ – ಚೆನ್ನೈ – ಮೈಸೂರು- ಬೆಂಗಳೂರು ರೈಲನ್ನು ಉದ್ಘಾಟಿಸಲಿದ್ದಾರೆ. ಇದು ಬಹಳ ದಿನಗಳ ನಮ್ಮ ಬೇಡಿಕೆಯಾದ ಹೈಸ್ಪೀಡ್ ರೈಲನ್ನು ಪ್ರಧಾನಿಗಳು ಈಡೇರಿಸುತ್ತಿದ್ದಾರೆ. ಜೊತೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಇದರ ಅವಶ್ಯಕತೆ ಕೂಡ ಇತ್ತು. ಬೆಂಗಳೂರಿಗೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದು, 25 ಲಕ್ಷ ಜನರನ್ನು ನಿಭಾಯಿಸುವ ಸಾಮರ್ಥ್ಯವುಳ್ಳ, ನೂರು ಕೌಂಟರ್ ಗಳುಳ್ಳ ಅಂತಾರಾಷ್ಟ್ರೀಯ ಟರ್ಮಿನಲ್ ಉದ್ಘಾಟನೆಯಾಗುತ್ತಿದೆ. ಎರಡೂ ಟರ್ಮಿನಲ್ ಕೂಡಿದರೆ, ದೆಹಲಿಯ ನಂತರ ದೇಶದ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಕರ್ನಾಟಕ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರವಾಸೋದ್ಯಮ, ಕೈಗಾರಿಕೆ, ಐ.ಟಿ, ಬಿಟಿ, ಆರ್.ಅಂಡ್ ಡಿ ವಲಯಗಳಿಗೂ ದೊಡ್ಡ ಅನುಕೂಲವಾಗಲಿದೆ ಎಂದರು.

ನಂತರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣವಾಗುತ್ತಿದೆ. ಕೆಂಪೇಗೌಡರು ವಿಕಾಸಪುರುಷರು. ಹೀಗಾಗಿ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಇಡೀ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳಿಂದ ಉದ್ಘಾಟನೆಯಾಗುತ್ತಿರುವುದು ಅತ್ಯಂತ ಯೋಗ್ಯವಾಗಿದೆ. ನಂತರ ಸಾರ್ವಜನಿಕ ಕಾರ್ಯಕ್ರಮವಿರಲಿದೆ ಎಂದರು.

See also  ಮಡಿಕೇರಿ: ಕೊಡಗಿನ ರಸ್ತೆ ಅಭಿವೃದ್ಧಿಗೆ ರಾಜ್ಯಸಭಾ ನಿಧಿಯಿಂದ 2.46 ಕೋಟಿ ರೂ. ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು